ಬಂಗಾರಪೇಟೆ ತಾಲ್ಲೂಕಿನಾದ್ಯಂತ ಮಳೆಯ ಸಿಂಚನ: ರೈತರ ಮೊಗದಲ್ಲಿ ಮಂದಹಾಸ

ಬಂಗಾರಪೇಟೆ ತಾಲ್ಲೂಕಿನಾದ್ಯಂತ ಮಳೆಯ ಸಿಂಚನ: ರೈತರ ಮೊಗದಲ್ಲಿ ಮಂದಹಾಸ

ಬಂಗಾರಪೇಟೆ ತಾಲ್ಲೂಕಿನಾದ್ಯಂತ ಮಳೆಯ ಸಿಂಚನ: ರೈತರ ಮೊಗದಲ್ಲಿ ಮಂದಹಾಸ

ಬಂಗಾರಪೇಟೆ: ತಾಲ್ಲೂಕಿನಾದ್ಯಂತ ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬತ್ತಿ ಹೋಗಿದ್ದ ಕೆರೆ-ಕುಂಟೆಗಳಿಗೆ ಅಪಾರ ಪ್ರಮಾಣದ ನೀರು ಬಂದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.

ತಾಲ್ಲೂಕಿನಾದ್ಯಂತ ತಡರಾತ್ರಿ ಆರಂಭವಾದ ಮಳೆಯು ಬೆಳಗಿನ ಜಾವದವರೆಗೂ ನಿರಂತರವಾಗಿ ಆರ್ಭಟಿಸಿದೆ. ಇದರಿಂದ ಯರಗೋಳ ಜಲಾಶಯ, ಮಾರ್ಕಂಡೇಯ ಜಲಾಶಯ, ಕಾಮಸಮುದ್ರ ವೃಷಭಾವತಿ ಕೆರೆ ಹಾಗೂ ಮುಷ್ಟ್ರಹಳ್ಳಿ ಕೆರೆಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ.

ಮುಂಗಾರಿನಲ್ಲಿ ಮಳೆಯಿಲ್ಲದೆ ಕೃಷಿ ಚಟುವಟಿಕೆಯಿಂದ ದೂರ ಉಳಿದಿದ್ದ ರೈತರು ಈಗ ಹುರುಳಿ, ಜೋಳ ಬಿತ್ತನೆಯಲ್ಲಿ ತೊಡಗಿದ್ದಾರೆ.

ರಾತ್ರಿ ಸುರಿದ ಮಳೆಯಿಂದಾಗಿ ಕೆಲವು ತಗ್ಗು ಪ್ರದೇಶ ಹಾಗೂ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಬೆಳಗ್ಗೆ ಸಂಚಾರಕ್ಕೆ ಕೊಂಚ ಅಡಚಣೆಯಾಗಿತ್ತು. ಸಾರ್ವಜನಿಕರು ಹಾಗೂ ಜಾನುವಾರು ಕಾಯುವವರು ಹರಿಯುವ ಹಳ್ಳ-ಕೊಳ್ಳಗಳ ಬಳಿ ತೆರಳದಂತೆ ತಾಲ್ಲೂಕು ಆಡಳಿತ ಜಾಗೃತಿ ಮೂಡಿಸಿದೆ. ಕೆರೆಗಳ ಕೋಡಿ ಬೀಳುವ ಹಂತದಲ್ಲಿರುವ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಕೆ.ಎನ್.ಸುಜಾತ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ