
ಅತ್ಯಾಚಾರ ಆರೋಪಿಗೆ ವಜಾ ಮಾಡಿ: ಪ್ರಜಾಶಕ್ತಿ ಪರಿಷತ್ ಆಗ್ರಹ
ಕಲಬುರಗಿ: ‘ಹಲವು ಕ್ರಿಮಿನಲ್ ಪ್ರಕರಣ ಹಾಗೂ ಅತ್ಯಾಚಾರ ಆರೋಪದಲ್ಲಿ ಜೈಲಿಗೆ ಹೋಗಿ ಬಂದ ಆರೋಪಿಯನ್ನು ಕೆಆರ್‌ಡಿಸಿಎಲ್ ಅಧಿಕಾರಿಗಳು ವಾಗ್ದರಿ–ರಿಬ್ಬನಪಲ್ಲಿ ಹೆದ್ದಾರಿಯ ಸೇಡಂ ತಾಲ್ಲೂಕಿನ ಆಡಕಿ ಟೋಲ್ ಗೇಟ್‌ನಲ್ಲಿ ನೇಮಕ ಮಾಡಿಕೊಂಡಿದ್ದಾರೆ. ಶೀಘ್ರದಲ್ಲಿ ಆರೋಪಿಯನ್ನು ಕೆಲಸದಿಂದ ವಜಾ ಮಾಡಬೇಕು’ ಎಂದು ಪ್ರಜಾಶಕ್ತಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಮೌನೇಶ ಬಡಗೇರ ಆಗ್ರಹಿಸಿದರು.
‘ಈ ಕುರಿತು ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಟೋಲ್ ವ್ಯವಸ್ಥಾಪಕರ ವಿರುದ್ಧವೂ ಕ್ರಮ ಜರುಗಿಸಬೇಕು. ಇಲ್ಲವಾದರೆ ಸೆ.10ರಂದು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ಮಾಡಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಂಭುಲಿಂಗ ನಾಟೀಕಾರ, ಹಣಮಂತ ದೊಡ್ಮನೆ ಹಾಜರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260906-30-1916868201