
ಸಚಿವ ಬಾಲಕೃಷ್ಣ ಶ್ರೀ ಕ್ಷೇತ್ರ ಉಚ್ಚಿಲ, ಕಾಪು ಹೊಸ ಮಾರಿಗುಡಿಗೆ ಭೇಟಿ
ಪಡುಬಿದ್ರಿ: ಪೌರಾಡಳಿತ ಸಚಿವ ಎಚ್.ಸಿ ಬಾಲಕೃಷ್ಣ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಉಚ್ಚಿಲ ಮತ್ತು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೂ ಭೇಟಿ ನೀಡಿದರು.
ಉಚ್ಚಿಲದಲ್ಲಿ ಕ್ಷೇತ್ರದ ವತಿಯಿಂದ ಗೌರವಿಸ ಲಾಯಿತು. ಆಡಳಿತ ಸಮಿತಿಯ ಅಧ್ಯಕ್ಷ ಗಿರಿಧರ್ ಸುವರ್ಣ ಮೂಳೂರು, ನಾರಾಯಣ ಸಿ. ಕರ್ಕೇರ, ದಿನೇಶ್ ಎರ್ಮಾಳ್, ಮೋಹನ್ ಬಂಗೇರ ಕಾಪು, ಶೇಖರ್ ಪುತ್ರನ್ ಎರ್ಮಾಳ್, ಪುರೋಹಿತರಾದ ಶ್ರೀಪತಿ ಉಪಾಧ್ಯಾಯ ಇದ್ದರು. ಮಾರಿಗುಡಿ ದೇವಳದ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ದೇವಳದ ಜೀರ್ಣೋದ್ಧಾರ ಕಾರ್ಯ ನಡೆದು ಬಂದ ಹಾದಿ ಮತ್ತು ಭಕ್ತರ ಪಾಲ್ಗೊಳ್ಳುವಿಕೆ ಬಗ್ಗೆ ತಿಳಿಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯ ಮನೋಹರ್ ರಾವ್ ಕಲ್ಯ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಧ್ಯಕ್ಷರಾದ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ್ ಶೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಇದ್ದರು.