ನರಸಿಂಹರಾಜಪುರ: ಅಂತರ ನಿಗದಿಯಿಂದ ಕಟ್ಟಡ ನಿರ್ಮಾಣಕ್ಕೆ ಸಮಸ್ಯೆ

ನರಸಿಂಹರಾಜಪುರ: ಅಂತರ ನಿಗದಿಯಿಂದ ಕಟ್ಟಡ ನಿರ್ಮಾಣಕ್ಕೆ ಸಮಸ್ಯೆ

ನರಸಿಂಹರಾಜಪುರ: ಅಂತರ ನಿಗದಿಯಿಂದ ಕಟ್ಟಡ ನಿರ್ಮಾಣಕ್ಕೆ ಸಮಸ್ಯೆ

ನರಸಿಂಹರಾಜಪುರ: ಮಹಾಯೋಜನೆ ರೂಪಿಸುವ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರವು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಸ್ತೆಯನ್ನು ರಾಜ್ಯ ಹೆದ್ದಾರಿ ಎಂದು ನಮೂದಿಸಿರುವುದರಿಂದ, ರಸ್ತೆ ಭೂಗಡಿ ಅಂಚಿನಿಂದ ಕಟ್ಟಡ ರೇಖೆಯ ಅಂತರ ನಿಗದಿಪಡಿಸಿರುವುದು ಕಟ್ಟಡ ನಿರ್ಮಾಣಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ.

ಈ ಹಿಂದೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸ್ಥಳೀಯ ಯೋಜನಾ ಪ್ರಾಧಿಕಾರ ಇರಲಿಲ್ಲ. ತರೀಕೆರೆ ಉಪವಿಭಾಗವೇ ಸ್ಥಳೀಯ ಯೋಜನಾ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತಿತ್ತು. ಪಟ್ಟಣದ ವ್ಯಾಪ್ತಿಯಲ್ಲಿ ಹೊಸ ಮನೆ ನಿರ್ಮಾಣಕ್ಕೆ ಪಟ್ಟಣ ಪಂಚಾಯಿತಿಯಿಂದಲೇ ಪರವಾನಗಿ ನೀಡಲಾಗುತ್ತಿತ್ತು.

ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ–1961ರ ಪ್ರಕಾರ ರಾಜ್ಯ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯನ್ನೇ, ನರಸಿಂಹರಾಜಪುರ ಸ್ಥಳೀಯ ಯೋಜನಾ ಪ್ರದೇಶವೆಂದು 2012ರ ಫೆಬ್ರುವರಿ 16ರಿಂದ ಜಾರಿಗೆ ಬರುವಂತೆ ಘೋಷಿಸಿತು. ಅಂದಿನಿಂದ ಪಟ್ಟಣದ ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ ನಗರ ಯೋಜನಾ ಪ್ರಾಧಿಕಾರದಿಂದ ಪರವಾನಗಿ ಪಡೆಯಬೇಕಾಗಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ರಸ್ತೆ ಭೂಗಡಿ ಅಂಚಿನಿಂದ ಕಟ್ಟಡ ರೇಖೆಯ ಅಂತರವನ್ನು 21 ಮೀಟರ್ ಎಂದು ನಿಗದಿಪಡಿಸಲಾಗಿದೆ. 2022ರಲ್ಲಿ 2041ರ ಜನಸಂಖ್ಯೆಯನ್ನು ಆಧರಿಸಿ ಮಹಾಯೋಜನೆ ರೂಪಿಸುವಾಗಲೂ ನಗರ ಯೋಜನಾ ಪ್ರಾಧಿಕಾರವು 2012ರ ಆದೇಶವನ್ನೇ ಪರಿಗಣಿಸಿರುವುದು ಸಮಸ್ಯೆಗೆ ಕಾರಣವಾಗಿದೆ.

ಪ್ರಸ್ತುತ ಪಟ್ಟಣದ ಬಸ್ ನಿಲ್ದಾಣದಿಂದ ಪ್ರವಾಸಿ ಮಂದಿರದವರೆಗೆ ಸರ್ಕಾರ ನಿಗದಿಪಡಿಸಿದ ದರದ ಎರಡು ಪಟ್ಟು ಪರಿಹಾರ ನೀಡಿ, ರಸ್ತೆಯ ಮಧ್ಯಭಾಗದಿಂದ ಎರಡೂ ಕಡೆ ತಲಾ 30 ಅಡಿ ಜಾಗ ಪಡೆದು ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ.

ಈ ವ್ಯಾಪ್ತಿಯ ರಸ್ತೆ ಪಟ್ಟಣದ ರಸ್ತೆಯಾಗಿದ್ದರೂ, ಮಹಾಯೋಜನೆ ರೂಪಿಸುವ ಸಂದರ್ಭದಲ್ಲಿ ಅದನ್ನು ರಾಜ್ಯ ಹೆದ್ದಾರಿ ಎಂದು ನಮೂದಿಸಿರುವುದು ಗೊಂದಲಕ್ಕೆ ಕಾರಣವಾಗಿದೆ.

ಈ ಕುರಿತು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ, ಬಸ್ ನಿಲ್ದಾಣದಿಂದ ಪ್ರವಾಸಿ ಮಂದಿರದವರೆಗಿನ ರಸ್ತೆ ರಾಜ್ಯ ಹೆದ್ದಾರಿಗೆ ಸೇರುವುದಿಲ್ಲ. ಇದು ಪಟ್ಟಣದ ರಸ್ತೆಯಾಗಿದ್ದು, ಇದಕ್ಕೆ ರಾಜ್ಯ ಹೆದ್ದಾರಿಗೆ ಅನ್ವಯಿಸುವ ಯಾವುದೇ ನಿಯಮ ಅನ್ವಯಿಸುವುದಿಲ್ಲ ಎಂದು ಮಾಹಿತಿ ನೀಡಿದರು.

ಪಟ್ಟಣದ ರಸ್ತೆ ಅಭಿವೃದ್ಧಿಪಡಿಸುವ ಉದ್ದೇಶದಿಂದ ₹60 ಕೋಟಿ ಬಿಡುಗಡೆ ಮಾಡಿಸಿ, ರಸ್ತೆ ವಿಸ್ತರಣೆಗೆ ಅಗತ್ಯವಿರುವ 30 ಅಡಿ ಜಾಗವನ್ನು ಸಂಬಂಧಪಟ್ಟ ಖಾತೆದಾರರಿಗೆ ಎರಡು ಪಟ್ಟು ಪರಿಹಾರ ನೀಡಿ ಪಡೆದುಕೊಳ್ಳಲಾಗಿದೆ. ರಸ್ತೆ ವಿಸ್ತರಣೆಗೂ ಯೋಜನಾ ಪ್ರಾಧಿಕಾರ ನಿಗದಿಪಡಿಸುವ ರಸ್ತೆ ಭೂಗಡಿ ಅಂಚಿನಿಂದ ಕಟ್ಟಡ ರೇಖೆಯ ಅಂತರಕ್ಕೂ ಯಾವುದೇ ಸಂಬಂಧವಿಲ್ಲ. ರಸ್ತೆ ವಿಸ್ತರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕೆಲವರು ನಿವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿರುವುದು ಬೇಸರದ ಸಂಗತಿ. ಪಟ್ಟಣದ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ಕೈಬಿಡುವಂತೆ ನಗರಾಭಿವೃದ್ಧಿ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಸಮಸ್ಯೆ ಬಗೆಹರಿಯಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ರಸ್ತೆ ರಾಜ್ಯ ಹೆದ್ದಾರಿಗೆ ಸೇರಿಲ್ಲ ಎಂಬ ಲೋಕೋಪಯೋಗಿ ಇಲಾಖೆಯ ವರದಿಯನ್ನು ಪಡೆದು ಜಿಲ್ಲಾಧಿಕಾರಿ ಮೂಲಕ ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಲಾಗಿದೆ. ಸಮಸ್ಯೆ ಬಗೆಹರಿಸುವಂತೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ಅವರೊಂದಿಗೆ ತೆರಳಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಮಸ್ಯೆ ಬಗೆಹರಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ತಿಳಿಸಿದರು.

260927-126-1729239959

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ