ಕುಷ್ಟಗಿ: ನಿಡಶೇಸಿ ಮಠದ ಚನ್ನಬಸವೇಶ್ವರ ಸ್ವಾಮೀಜಿ ಲಿಂಗೈಕ್ಯ

ಕುಷ್ಟಗಿ: ನಿಡಶೇಸಿ ಮಠದ ಚನ್ನಬಸವೇಶ್ವರ ಸ್ವಾಮೀಜಿ ಲಿಂಗೈಕ್ಯ

ಕುಷ್ಟಗಿ: ನಿಡಶೇಸಿ ಮಠದ ಚನ್ನಬಸವೇಶ್ವರ ಸ್ವಾಮೀಜಿ ಲಿಂಗೈಕ್ಯ

ಕುಷ್ಟಗಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ನಿಡಶೇಸಿಯ ಚನ್ನಬಸವೇಶ್ವರ ಮಠದ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ (78) ಮಂಗಳವಾರ ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ.

ನಿಡಶೇಸಿ ಮೂಲಮಠ ಸೇರಿದಂತೆ ಕುಷ್ಟಗಿ ಕಲ್ಮಠ, ಗೆಜ್ಜೆಬಾವಿ, ಜಾಲಕಮಲದಿನ್ನಿ, ಗುಡದೂರು ಶಾಖಾ ಮಠಗಳಿವೆ. ನಿಡಶೇಸಿ ಮೂಲದ ಚನ್ನ ಬಸವೇಶ್ವರ ಸ್ವಾಮೀಜಿ ಅವರ ಪೂರ್ವಾಶ್ರಮದ ಹೆಸರು ಶಾಂತಮೂರ್ತಯ್ಯ.

ಇವರು ವೇದಮೂರ್ತಿ ಮಹಾಂತಯ್ಯ ಹಾಗೂ ನೀಲಮ್ಮ ದಂಪತಿ ಪುತ್ರರು.

ವೀರಶೈವ ಲಿಂಗಾಯತ ಧರ್ಮಧಾರಿತ ಶಿಕ್ಷಣ ಸಂಸ್ಥೆಗಳನ್ನು ಸ್ವಾಮೀಜಿ ಆರಂಭಿಸಿದ್ದರು. ಧರ್ಮ ಮಾರ್ಗದಲ್ಲಿ ನಡೆಯುವ ನಿಟ್ಟಿನಲ್ಲಿ ಭಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದರು.

ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ವಾಮೀಜಿ ಲಿಂಗೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ವಿವಿಧ ಮಠಾಧೀಶರು ಹಾಗೂ ಭಕ್ತರು ಬಹಳಷ್ಟು ಸಂಖ್ಯೆಯಲ್ಲಿ ನಿಡಶೇಸಿಗೆ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಲಿಂಗೈಕ್ಯ ಶ್ರೀಗಳ ಕ್ರಿಯಾ ಸಮಾಧಿ ಮಠದ ಆವರಣದಲ್ಲಿ ಮಂಗಳವಾರ ಸಂಜೆ 4 ಗಂಟೆಗೆ ನೆರವೇರಲಿದೆ. ಮದ್ದಾನೇಶ್ವರ ಕರಿಬಸವ ಶಿವಾಚಾರ್ಯ ಸ್ವಾಮೀಜಿ, ಚಳಗೇರಾದ ವೀರಸಂಗಮೇಶ್ವರ ಹಾಗೂ ಅಭಿನವ ಕರಿಬಸವ ಶಿವಾಚಾರ್ಯ ಸೇರಿದಂತೆ ವಿವಿಧ ಮಠಾಧೀಶರು ಸಂತಾಪ ವ್ಯಕ್ತಪಡಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ