ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಗೆ ಅಡ್ಡಿಯಾಗಿದ್ದ ಕಟ್ಟಡ ತೆರವು

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಗೆ ಅಡ್ಡಿಯಾಗಿದ್ದ ಕಟ್ಟಡ ತೆರವು

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಗೆ ಅಡ್ಡಿಯಾಗಿದ್ದ ಕಟ್ಟಡ ತೆರವು

ಚಿಕ್ಕಬಳ್ಳಾಪುರ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 69ರ ವಿಸ್ತರಣೆಗೆ ಅಡ್ಡಿಯಾಗಿದ್ದ ಕಟ್ಟಡ ಹಾಗೂ ಅಂಗಡಿಗಳನ್ನು ಬುಧವಾರ ಪೊಲೀಸ್ ಬಂದೋಬಸ್ತ್‌ ಮೂಲಕ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತೆರವುಗೊಳಿಸಿದರು.

ಶಿಡ್ಲಘಟ್ಟ ವೃತ್ತದಲ್ಲಿ ನಡೆದ ತೆರವು ಕಾರ್ಯದ ಸಂದರ್ಭದಲ್ಲಿ ಮಾಲೀಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಸಹ ನಡೆಯಿತು.

ಇಲ್ಲಿನ ಅಂಗಡಿಗಳ ಮಾಲೀಕರಿಗೆ ಹಲವು ಬಾರಿ ನೋಟಿಸ್ ನೀಡಿದರೂ ಅಂಗಡಿ ತೆರವುಗೊಳಿಸಿರಲಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರಸ್ತೆ ಮಧ್ಯಭಾಗದಿಂದ ಎರಡೂ ಬದಿಯಲ್ಲಿ ಸುಮಾರು 40 ಅಡಿಗಳವರೆಗಿನ ಒತ್ತುವರಿ ತೆರವುಗೊಳಿಸಿದರು.

ಹೊನ್ನಾವರದಿಂದ ಆಂಧ್ರಪ್ರದೇಶದ ಚಿತ್ತೂರುವರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 69ರ ಕಾಮಗಾರಿ ನಗರದಲ್ಲೂ ನಡೆಯುತ್ತಿದೆ. ಎಂ.ಜಿ ರಸ್ತೆಯಲ್ಲಿ ಈಗಾಗಲೇ ಬಹುತೇಕ ರಸ್ತೆ ಕಾಮಗಾರಿ ಪೂರ್ಣವಾಗಿದೆ.

ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪದ ಹೂವಿನ ಅಂಗಡಿಗಳು ಹಾಗೂ ವೆಂಕಟೇಶ್ವರ ಬೇಕರಿ ಬಳಿಯ ಕಟ್ಟಡಗಳಿಗೆ ಸಂಬಂಧಿಸಿದ ಮಾಲೀಕರಿಗೆ ಒಂದು ವರ್ಷದಿಂದ ನೋಟಿಸ್ ನೀಡಲಾಗಿತ್ತು ಎನ್ನಲಾಗಿದೆ. ಈ ವೇಳೆ ಪಿಳ್ಳಪ್ಪ ವಾಣಿಜ್ಯ ಸಂಕೀರ್ಣದಿಂದ ಶಿಡ್ಲಘಟ್ಟ ವೃತ್ತದವರೆಗೆ ಸಂಚಾರ ಬಂದ್ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ‍ಪೊಲೀಸರನ್ನು ನಿಯೋಜಿಸಲಾಗಿತ್ತು.

ಈ ವೇಳೆ ಅಂಗಡಿ ಮಾಲೀಕರು ತಮ್ಮ ಗಮನಕ್ಕೆ ತರದೇ ಏಕಾಏಕಿ ತೆರವು ಮಾಡಲಾಗುತ್ತಿದೆ. ಕನಿಷ್ಠ 2 ದಿನಗಳ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. ಆದರೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ