ಸಂಡೂರಿನಲ್ಲಿ ಕೂಲಿ ಕಾರ್ಮಿಕ ಸಾವು: ಪ್ರಕರಣ ದಾಖಲು

ಸಂಡೂರಿನಲ್ಲಿ ಕೂಲಿ ಕಾರ್ಮಿಕ ಸಾವು: ಪ್ರಕರಣ ದಾಖಲು

ಸಂಡೂರಿನಲ್ಲಿ ಕೂಲಿ ಕಾರ್ಮಿಕ ಸಾವು: ಪ್ರಕರಣ ದಾಖಲು

ಸಂಡೂರು: ತಾಲ್ಲೂಕಿನ ಚೋರುನೂರು ಹೋಬಳಿಯ ಎಸ್. ಓಬಳಾಪುರ ಗ್ರಾಮದ ಕೆರೆಯಲ್ಲಿ ವಿಬಿ ಜಿ ರಾಮ್‌ಜಿ ಯೋಜನೆಡಿ ಕೆಲಸ ಮಾಡುವ ವೇಳೆ ಎದೆ ನೋವು ಕಾಣಿಸಿಕೊಂಡು ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಜರುಗಿದೆ.

ಎಸ್. ಓಬಳಾಪುರ ಗ್ರಾಮದ ನಿವಾಸಿ ಎಂ.ಪಾಲಯ್ಯ (49) ಮೃತಪಟ್ಟ ಕೂಲಿ ಕಾರ್ಮಿಕನಾಗಿದ್ದು, ಮೃತ ಕಾರ್ಮಿಕನು ಎಂದಿನಂತೆ ಸರ್ಕಾರದ ವಿಬಿ ಜಿ ರಾಮ ಜಿ ಯೋಜನೆಡಿ ಬೊಮ್ಮಘಟ್ಟ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಎಸ್.ಓಬಳಾಪುರ ಗ್ರಾಮದ ಕೆರೆಯಲ್ಲಿ ಕೆಲಸ ಮಾಡುವ ವೇಳೆ ಆಕಸ್ಮಿಕವಾಗಿ ಎದೆ ನೋವು ಕಾಣಿಸಿಕೊಂಡಿದೆ.

ತಕ್ಷಣ ಸ್ಥಳದಲ್ಲಿದ್ದ ಕಾರ್ಮಿಕರು ಅಸ್ವಸ್ಥಗೊಂಡ ಕಾರ್ಮಿಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ಪಟ್ಟಣಕ್ಕೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಬೊಮ್ಮಘಟ್ಟ ಗ್ರಾಮ ಪಂಚಾಯಿತಿಯ ಪಿಡಿಒ ಸದಾಶಿವಪ್ಪ ಅವರು ನೀಡಿದ ದೂರು ಆಧರಿಸಿ ಚೂರನೂರು ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ