ನಾವು ಜನರ ಭಾವನೆ ಮೇಲೆ ರಾಜಕೀಯ ಮಾಡುವುದಿಲ್ಲ: ಡಿ. ಕೆ. ಶಿವಕುಮಾರ್
ಮಂಗಳೂರು: ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,
'ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ' ಎಂದರು.
'ಗಾಂಧಿ ಅವರು ಉಳಿದುಕೊಂಡಿದ್ದ ಮನೆಗೆ ಭೇಟಿ ನೀಡಿದೆ. ಉಪಾಹಾರಕ್ಕೆ ಮಂಗಳೂರು ಬನ್ಸ್, ದೋಸೆ ಸವಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುವೆ' ಎಂದು ಹೇಳಿದರು.