ಉಡುಪಿ: ಸಂಭ್ರಮದ ತೆನೆ ಹಬ್ಬ ಆಚರಣೆ

ಉಡುಪಿ: ಸಂಭ್ರಮದ ತೆನೆ ಹಬ್ಬ ಆಚರಣೆ

ಉಡುಪಿ: ಸಂಭ್ರಮದ ತೆನೆ ಹಬ್ಬ ಆಚರಣೆ

ಉಡುಪಿ: ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಮಾತೆ ಮೇರಿ ಹುಟ್ಟುಹಬ್ಬ ಮತ್ತು ತೆನೆ ಹಬ್ಬವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಿದರು.

ಚರ್ಚ್ ಗಳಲ್ಲಿ ತೆನೆಗಳಿಗೆ ಪೂಜೆ, ವಿಶೇಷ ಪ್ರಾರ್ಥನೆ, ಮಾತೆ ಮೇರಿಯಮ್ಮ ಅವರ ಬಾಲ ರೂಪಕ್ಕೆ ಮಕ್ಕಳಿಂದ ಪುಷ್ಪಾರ್ಚನೆ ನಡೆಯಿತು.

ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ದೇವಾಲಯದಲ್ಲಿ ನಿವೃತ್ತ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಹೊಸ ತೆನೆಯನ್ನು ಆಶೀರ್ವಚಿಸಿ ಹಬ್ಬದ ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮೊಂತಿ ಹಬ್ಬವು ಧಾರ್ಮಿಕ ಮಹತ್ವವನ್ನು ಹೊಂದಿರುವುದರ ಜೊತೆಗೆ, ಕೃತಜ್ಞತೆ, ಕುಟುಂಬ, ಹಂಚಿಕೆ ಮತ್ತು ಪರಸ್ಪರ ಕಾಳಜಿಯಂತಹ ಸಾರ್ವತ್ರಿಕ ಮೌಲ್ಯಗಳನ್ನು ಸಾರುವ ಶ್ರೀಮಂತ ಸಾಂಸ್ಕೃತಿಕ ಪರಂಪರೆಯೂ ಆಗಿದೆ ಎಂದರು.

ಉಡುಪಿ ಶೋಕಮಾತಾ ದೇವಾಲಯದಲ್ಲಿ ಚರ್ಚಿನ ಧರ್ಮಗುರು ಡೆನಿಸ್ ಡೆಸಾ ನೇತೃತ್ವದಲ್ಲಿ ಹಬ್ಬದ ವಿಶೇಷ ಬಲಿಪೂಜೆ ನೆರವೇರಿತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ