
ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ
ಮಡಿಕೇರಿ: ಲೋಕಾಯುಕ್ತ ಅಧಿಕಾರಿಗಳು ಸೆ. 9ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಮಾಹಿತಿಗೆ, ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿ ದೂ: 08272-295297 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.