ಹರಪನಹಳ್ಳಿ: ಸಕಾಲಕ್ಕೆ ಬಸ್ ಸಿಗದೆ ವಿದ್ಯಾರ್ಥಿಗಳಿಗೆ ತರಗತಿ ‘ಮಿಸ್‌’

ಹರಪನಹಳ್ಳಿ: ಸಕಾಲಕ್ಕೆ ಬಸ್ ಸಿಗದೆ ವಿದ್ಯಾರ್ಥಿಗಳಿಗೆ ತರಗತಿ ‘ಮಿಸ್‌’

ಹರಪನಹಳ್ಳಿ: ಸಕಾಲಕ್ಕೆ ಬಸ್ ಸಿಗದೆ ವಿದ್ಯಾರ್ಥಿಗಳಿಗೆ ತರಗತಿ ‘ಮಿಸ್‌’

ಹರಪನಹಳ್ಳಿ: ತಾಲ್ಲೂಕಿನ ಅನಂತನಹಳ್ಳಿ ಬಳಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ, ಸಕಾಲಕ್ಕೆ ಸಾರಿಗೆ ವ್ಯವಸ್ಥೆ ಸಿಗದೆ ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗುವಂತಾಗಿದೆ.

ವಿಶೇಷವಾಗಿ ಅನಂತನಹಳ್ಳಿ ಬಳಿಯ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಸಮರ್ಪಕ ಬಸ್‌ ಸೌಲಭ್ಯವಿಲ್ಲದೆ ಪ್ರತಿನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ತಾಲ್ಲೂಕಿನ ನೀಲಗುಂದ, ಕಡಬಗೆರೆ, ಮತ್ತಿಹಳ್ಳಿ, ಹಲುವಾಗಲು, ನಂದಿಬೇವೂರು, ಕಣಿವಿಹಳ್ಳಿ, ಮೈದೂರು, ಕಂಚಿಕೆರೆ, ಬೆಂಡಿಗೆರೆ ಹಾಗೂ ಇಟ್ಟಿಗುಡಿ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಹಳ್ಳಿಗಳಿಂದ ಮಕ್ಕಳು ಈ ಶಾಲೆಗೆ ವ್ಯಾಸಂಗಕ್ಕಾಗಿ ಬರುತ್ತಾರೆ. ಇದರ ಜೊತೆಗೆ ಸಮೀಪದ ಪಾಲಿಟೆಕ್ನಿಕ್ ಹಾಗೂ ಐಟಿಐ ಕಾಲೇಜುಗಳಿಗೂ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಾರೆ.

ಈ ಮಾರ್ಗದಲ್ಲಿ ಸಂಚರಿಸುವ ಸಾರಿಗೆ ಸಂಸ್ಥೆಯ ಬಸ್‌ಗಳು ವಿದ್ಯಾರ್ಥಿಗಳನ್ನು ಕಂಡರೆ ನಿಲ್ಲಿಸುತ್ತಿಲ್ಲ. ಅತಿಯಾದ ಜನದಟ್ಟಣೆಯಿಂದಾಗಿ ಕೆಲವೇ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು, ಉಳಿದವರನ್ನು ನಿಲ್ದಾಣದಲ್ಲೇ ಬಿಟ್ಟು ಹೋಗುತ್ತಿವೆ. ಇದರಿಂದ ರೋಸಿಹೋದ ಪೋಷಕರು ಕೆಲವೆಡೆ ಬಸ್‌ಗಳನ್ನು ತಡೆದು, ಸಾರಿಗೆ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ ಘಟನೆಗಳೂ ನಡೆದಿವೆ.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿದ್ದನಗೌಡ್ರು ಮಾತನಾಡಿ, ಶಾಲೆಯಲ್ಲಿ 6ರಿಂದ 10ನೇ ತರಗತಿಗಳಿದ್ದು, ಒಟ್ಟು 550ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಆದರೆ, ಶಾಲೆ ಬಿಡುವ ಸಮಯದಲ್ಲಿ ಎರಡು ಬಸ್‌ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ಬಸ್‌ನಲ್ಲಿ ಮುಗಿಬಿದ್ದು, ನೇತಾಡಿಕೊಂಡು ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿ ಬೆಳಿಗ್ಗೆ ಶಾಲೆಗೆ ಹಾಗೂ ಸಂಜೆ ಮರಳಿ ತಮ್ಮ ಊರುಗಳಿಗೆ ಪ್ರಯಾಣಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದರು.

ಈ ಗಂಭೀರ ಸಮಸ್ಯೆಯ ಕುರಿತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಕನಿಷ್ಠ 4 ಹೆಚ್ಚುವರಿ ಬಸ್‌ಗಳನ್ನಾದರೂ ಬಿಡುವಂತೆ ಮಾಡಿದ ಮನವಿಗಳು ಅರಣ್ಯರೋದನವಾಗಿವೆ ಎಂದು ಪೋಷಕರಾದ ಸಾಸಿವೆಹಳ್ಳಿ ಬಸವನಗೌಡ್ರು, ನೀಲಗುಂದ ನಾಗರಾಜ ಹಾಗೂ ಕುಂಚೂರು ಹಾಲೇಶಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಯಾವುದೇ ಅನಾಹುತ ಸಂಭವಿಸಿ ಜೀವಕ್ಕೆ ಅಪಾಯ ಎದುರಾಗುವ ಮುನ್ನ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾರಿಗೆ ಬಸ್‌ಗಳ‌ ಸಂಖ್ಯೆಯನ್ನು ಕೂಡಲೇ ಹೆಚ್ಚಿಸಬೇಕು ಎಂದು ಪಾಲಕರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260902-25-266577456

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ