ಚಿಕ್ಕಬಳ್ಳಾಪುರ ಎಡಿಎಲ್‌ಆರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ದಾಖಲೆ ಪರಿಶೀಲನೆ

ಚಿಕ್ಕಬಳ್ಳಾಪುರ ಎಡಿಎಲ್‌ಆರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ದಾಖಲೆ ಪರಿಶೀಲನೆ

ಚಿಕ್ಕಬಳ್ಳಾಪುರ ಎಡಿಎಲ್‌ಆರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ದಾಖಲೆ ಪರಿಶೀಲನೆ

ಚಿಕ್ಕಬಳ್ಳಾಪುರ: ಸರ್ಕಾರಿ ಬಿ-ಖರಾಬು ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಚಿಕ್ಕಬಳ್ಳಾಪುರದ ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಕಚೇರಿ ಮತ್ತು ರೈತರೊಬ್ಬರ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು.

ಆವುಲಗುರ್ಕಿ ಗ್ರಾಮದ ಸರ್ವೆ ನಂ 67ರಲ್ಲಿ 17 ಗುಂಟೆ ಸರ್ಕಾರಿ ಬಾವಿ, ಕೆರೆ ಬಾವಿಯನ್ನು ನಾಗರಾಜು ಅವರಿಗೆ ದರಖಾಸ್ತು ಮೂಲಕ ಮಂಜೂರು ಮಾಡಿದ್ದಾರೆ. ಈ ಕೆರೆ ಬಾವಿಯಲ್ಲಿ ದನ ಕರುಗಳಿಗೆ ನೀರು ಕುಡಿಸಲಾಗುತ್ತಿತ್ತು. ಬೇಸಿಗೆಯಲ್ಲಿ ಅದರಲ್ಲಿರುವ ಮಣ್ಣನ್ನು ಜಮೀನುಗಳನ್ನು ಹೊಡೆಯುತ್ತಿದ್ದರು. ಈಗ ಇದನ್ನು ಮುಚ್ಚಿ ಸ್ವಂತಕ್ಕೆ ಉಪಯೋಗಿಸುತ್ತಿದ್ದಾರೆ. ಇದರಿಂದ ಬೇಸಿಗೆಯಲ್ಲಿ ದನ ಕರುಗಳಿಗೆ ನೀರಿನ ತೊಂದರೆ ಆಗುತ್ತಿದೆ. ಈ ಮಂಜೂರು ಕಾನೂನು ಬಾಹಿರವಾಗಿದೆ. ಈ ಮಂಜೂರು ರದ್ದುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು 2022ರಲ್ಲಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು.

ಪ್ರಕರಣ ಸಂಬಂಧ ರೈತ ನಾಗರಾಜ್, ಅಂದಿನ ಗ್ರಾಮ ಆಡಳಿತಾಧಿಕಾರಿ, ಕಂದಾಯ ಅಧಿಕಾರಿ ಮತ್ತು ತಹಶೀಲ್ದಾರರು, ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರ ವಿರುದ್ಧವೂ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತನಿಖೆಯ ಭಾಗವಾಗಿ ಲೋಕಾಯುಕ್ತ ಪೊಲೀಸರು ಈ ದಾಳಿ ನಡೆಸಿದ್ದಾರೆ. ಜಮೀನು ಮಂಜೂರಾತಿ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಮಂಜೂರಾತಿ ವೇಳೆ ನಿಯಮಗಳನ್ನು ಪಾಲಿಸಲಾಗಿದೆಯೇ, ಅಧಿಕಾರಿಗಳ ಪಾತ್ರವೇನು ಎನ್ನುವ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುತ್ತಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ