ಅತ್ತಿಬೆಲೆಯಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಮನವಿ

ಅತ್ತಿಬೆಲೆಯಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಮನವಿ

ಅತ್ತಿಬೆಲೆಯಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಮನವಿ

ಅತ್ತಿಬೆಲೆ (ಆನೇಕಲ್): ಇಲ್ಲಿಯ ಪುರಸಭೆ ಮುಂಭಾಗದಲ್ಲಿ ತಾಲ್ಲೂಕು ಆಡಳಿತದಿಂದ ಪ್ರಜಾ ಸೇವಾ ಆಂದೋಲನದಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಒತ್ತಾಯ ಕೇಳಿ ಬಂತು.

ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 64 ಅರ್ಜಿಯನ್ನು ಜನರು ಸಲ್ಲಿಸಿದರು. ಕೆರೆ ಮತ್ತು ರಾಜಕಾಲುವೆ ಒತ್ತುವರಿ ತೆರವು, ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಸಮಸ್ಯೆ ಬಗ್ಗೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಕಂದಾಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚು ದೂರುಗಳು ಬಂದಿದ್ದವು.

ಅತ್ತಿಬೆಲೆಯ ಪಟಾಲಮ್ಮ ಕೆರೆಯ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಒತ್ತು ನೀಡುವುದರಿಂದ ಮುಂದಿನ ಪೀಳಿಗೆಗೆ ಕೆರೆ, ಕುಂಟೆ, ಕಲ್ಯಾಣಿಗಳು ಉಳಿಯುತ್ತವೆ ಇಲ್ಲವಾದಲ್ಲಿ ಶ್ರೀಮಂತರ ಪಾಲಾಗುತ್ತದೆ ಎಂದು ಕೆರೆ ಕಟ್ಟೆ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿ.ಬಾಬು ಒತ್ತಾಯಿಸಿದರು.

ಶಾಸಕ ಬಿ.ಶಿವಣ್ಣ, ‘ರಾಜಕಾಲುವೆಗಳ ಒತ್ತುವರಿ ತೆರವಿಗೆ ತಾಲ್ಲೂಕು ಆಡಳಿತ ಹೆಚ್ಚು ಆದ್ಯತೆ ನೀಡಬೇಕು. ರಾಜಸ್ವ ನಿರೀಕ್ಷಕರು ಮತ್ತು ಉಪತಹಶೀಲ್ದಾರರು ಈ ಬಗ್ಗೆ ಕ್ರಮ ವಹಿಸಿ ಜಲಮೂಲ ಸಂರಕ್ಷಿಸಬೇಕು. ಪ್ರಜಾಸೇವಾ ಆಂದೋಲನದಲ್ಲಿ ಬಂದ ಅರ್ಜಿಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಆಹಾರ ಕಿಟ್‌, ಸುಕನ್ಯಾ ಸಮೃದ್ಧಿ ಯೋಜನೆ, ಹಿರಿಯ ನಾಗರಿಕರಿಗೆ ಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ತಹಶೀಲ್ದಾರ್‌ ಶಶಿಧರ್‌ ಮಡ್ಯಾಳ್‌, ವಿಶೇಷ ತಹಶೀಲ್ದಾರ್‌ ಮುನಿವೆಂಕಟಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭೈರಪ್ಪ, ಎಡಿಎಲ್‌ಆರ್‌ ಮದನ್‌, ಪೊಲೀಸ್‌ ಇನ್‌ಸ್ಪೆಕ್ಟರ್‌ ಮಂಜುನಾಥ್‌, ಗ್ರೇಡ್‌ ತಹಶೀಲ್ದಾರ್‌ ನೀಲಾಬಾಯಿ, ಪುರಸಭೆ ಮುಖ್ಯಾಧಿಕಾರಿ ದೊಡ್ಡಮಲವಯ್ಯ, ವ್ಯವಸ್ಥಾಪಕ ನಂಜುಂಡಸ್ವಾಮಿ, ಹೆಬ್ಬಗೋಡಿ ನಗರಸಭೆ ಪೌರಾಯುಕ್ತ ಬಿ.ಎಲ್‌.ರಾಜೇಂದ್ರ, ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ