ನಿರಂತರ ಜನಪರ ಹೋರಾಟಗಳೇ ತಕ್ಕ ಉತ್ತರ ನೀಡಲಿವೆ: ಶ್ರೀನಿವಾಸ್

ನಿರಂತರ ಜನಪರ ಹೋರಾಟಗಳೇ ತಕ್ಕ ಉತ್ತರ ನೀಡಲಿವೆ: ಶ್ರೀನಿವಾಸ್

ನಿರಂತರ ಜನಪರ ಹೋರಾಟಗಳೇ ತಕ್ಕ ಉತ್ತರ ನೀಡಲಿವೆ: ಶ್ರೀನಿವಾಸ್

ಮಾಲೂರ: ‘ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ನಶಿಸಿಹೋಗುತ್ತದೆ ಎಂದು ಭಾವಿಸಿದವರಿಗೆ ಕಾರ್ಯಕರ್ತರ ಒಗ್ಗಟ್ಟು ಮತ್ತು ನಿರಂತರ ಜನಪರ ಹೋರಾಟಗಳೇ ತಕ್ಕ ಉತ್ತರ ನೀಡಲಿವೆ’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಶ್ರೀನಿವಾಸ್ ತಿಳಿಸಿದರು.

ನಗರದಲ್ಲಿ ನಡೆದ ರಕ್ಷಣಾ ವೇದಿಕೆ ಜಿಲ್ಲಾ ಹಾಗೂ ವಿವಿಧ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಆದೇಶ ಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಈಗಾಗಲೇ ಜಿಲ್ಲಾ ಸಮಿತಿ ಸೇರಿದಂತೆ ಮಾಲೂರು, ಬಂಗಾರಪೇಟೆ ಹಾಗೂ ಮುಳಬಾಗಿಲು ತಾಲ್ಲೂಕು ಘಟಕಗಳ ಆಯ್ಕೆ ಪೂರ್ಣಗೊಂಡಿದೆ. ಕೋಲಾರ, ಶ್ರೀನಿವಾಸಪುರ ಹಾಗೂ ಕೆಜಿಎಫ್ ತಾಲ್ಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲಾಗುವುದು. ಕೆಜಿಎಫ್ ಭಾಗದಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡದೆ ಹೊರರಾಜ್ಯದವರಿಗೆ ಮಣೆ ಹಾಕಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿದೆ. ನೆಲ-ಜಲ ಮತ್ತು ಕನ್ನಡಿಗರ ಹಕ್ಕುಗಳಿಗೆ ಧಕ್ಕೆಯಾದಾಗ ಕರವೇ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಲಿದೆ ಎಂದರು.

ಸಮಾರಂಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ವಿ. ಮುರಳೀಧರ್, ರೈತ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಬಂಗಾರಿ ಮಂಜು, ಜಿಲ್ಲಾ ಯುವ ಘಟಕದ ಅಧ್ಯಕ್ಷ ಭರತ್ ಕುಮಾರ್, ಮಾಲೂರು ತಾಲ್ಲೂಕು ಅಧ್ಯಕ್ಷ ಎಂ.ಎಲ್. ಸಂತೋಷ್, ಪ್ರಧಾನ ಕಾರ್ಯದರ್ಶಿ ಎಂ.ಸಿ. ರವಿ, ಮಹಿಳಾ ಘಟಕದ ಅಧ್ಯಕ್ಷೆ ಸುಮಾ, ಕಾರ್ಮಿಕ ಘಟಕದ ಅಧ್ಯಕ್ಷ ಸಂತೇಹಳ್ಳಿ ಅಂಬರೀಶ್, ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷ ಶಿವರುದ್ರಯ್ಯ ಟಿ.ಎಲ್., ಮಹಿಳಾ ಘಟಕದ ಅಧ್ಯಕ್ಷೆ ಜಿ. ನಾಗರತ್ನಮ್ಮ, ಮುಳಬಾಗಿಲು ತಾಲೂಕು ಅಧ್ಯಕ್ಷ ಸೈಯದ್ ಹುಸೈನ್ ಹಾಗೂ ಜಿಲ್ಲಾ ಗೌರವಾಧ್ಯಕ್ಷ ಸತೀಶ್ ಪಿ.ಎಸ್., ವಿ. ಮುನಿಸ್ವಾಮಿ, ಎಸ್. ನಂಜುಂಡಪ್ಪ, ಕೆ.ಎಸ್. ನಾಗೇಶ್ ಬಾಬು, ವೆಂಕಟರವಣಪ್ಪ ವಿ., ಉಪಾಧ್ಯಕ್ಷರಾಗಿ ರಾಮಕೃಷ್ಣಪ್ಪ ಪಿ., ನಾರಾಯಣಸ್ವಾಮಿ ಆರ್.ಕೆ., ಜಿ.ವಿ. ರಾಮ್ ಪ್ರಸಾದ್, ನಾಗರಾಜ್ ಟಿ.ಎಂ., ಡಿ.ಸಿ. ಚಂದ್ರಶೇಖರ್, ಜಿಲ್ಲಾ ಖಜಾಂಚಿ ಶಂಕರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್, ಜಿಲ್ಲಾ ಕಾರ್ಯದರ್ಶಿ ಪ್ರತಾಪ್ ಕುಮಾರ್ ಹಾಗೂ ನಗರ ಘಟಕದ ಅಧ್ಯಕ್ಷರಾಗಿ ನವೀನ್, ಅರ್ಜುನ್, ಸೈಯದ್ ಮುಹಿಬ್ ಅವರನ್ನು ಆಯ್ಕೆ ಮಾಡಲಾಯಿತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ