
ಬಿಜೆಪಿ ವಿರುದ್ಧ ರಾಷ್ಟ್ರಪತಿ, ರಾಜ್ಯಪಾಲರಿಗೆ ಟಿಎಂಸಿ ಪತ್ರ
ಕೋಲ್ಕತ್ತ (ಪಿಟಿಐ): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಬಿಜೆಪಿ ನೇತೃತ್ವದ ಸರ್ಕಾರವು ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಟಿಎಂಸಿ ಪಕ್ಷ, ಈ ಕುರಿತು ಚರ್ಚಿಸಲು ರಾಷ್ಟ್ರಪತಿ ದೌಪದಿ ಮುರ್ಮು ಮತ್ತು ರಾಜ್ಯಪಾಲ ಆರ್.ಎನ್. ರವಿ ಅವರಲ್ಲಿ ಸಮಯ ಕೇಳಿದೆ.
‘ಪಕ್ಷವು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಗುರುವಾರ ಪತ್ರ ಬರೆದಿದ್ದು, ತೃಣಮೂಲ ಕಾಂಗ್ರೆಸ್ ನಿಯೋಗದೊಂದಿಗೆ ತುರ್ತು ಸಭೆಗಳನ್ನು ನಡೆಸಲು ಕಾಲಾವಕಾಶ ಕೋರಿದೆ’ ಎಂದು ಟಿಎಂಸಿ ರಾಜ್ಯಸಭಾ ನಾಯಕ ಡೆರೆಕ್ ಒಬ್ರಯಾನ್ ತಿಳಿಸಿದ್ದಾರೆ.
‘ರಾಜ್ಯದಲ್ಲಿ ಪೊಲೀಸರು ಬಿಜೆಪಿಯ ಕಾರ್ಯಕರ್ತರಂತೆ ಬಹಿರಂಗವಾಗಿ ವರ್ತಿಸುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260904-51-1984708044
Tags
Nation