ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೇಶವರೆಡ್ಡಿಗೆ ಕೋಕ್?

ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೇಶವರೆಡ್ಡಿಗೆ ಕೋಕ್?

ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೇಶವರೆಡ್ಡಿಗೆ ಕೋಕ್?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಬದಲಾವಣೆಗೆ ಕಾಲ ಸನ್ನಿತವಾಗಿದೆ. ಅವರ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಎಂ.ಎಸ್. ಸಂದೀಪ್ ಚಕ್ರವರ್ತಿ ನೇಮಕವಾಗುವುದು ನಿಚ್ಚಳವಾಗಿದೆ. ಸಂದೀಪ್ ಚಕ್ರವರ್ತಿ ಮಾಜಿ ಶಾಸಕ ಎಂ.ಶಿವಾನಂದ್ ಅವರ ಪುತ್ರ.

ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಸದಸ್ಯರನ್ನು ನಾಮನಿರ್ದೇಶನ ಮಾಡುವ ಸಂಬಂಧ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯು ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರ ಬದಲಾವಣೆಯನ್ನು ತೋರುತ್ತಿದೆ. ಜಿಲ್ಲಾಧಿಕಾರಿ ಅವರು ಅಭಿಪ್ರಾಯದೊಂದಿಗೆ ವರದಿ ನೀಡಿದ ನಂತರ ನಗರಾಭಿವೃದ್ಧಿ ಇಲಾಖೆಯು ಈ ನೇಮಕದ ಅಧಿಕೃತ ಆದೇಶ ಹೊರಡಿಸಲಿದೆ.

ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರನ್ನು ನಾಮನಿರ್ದೇಶನ ಮಾಡುವಂತೆ ಕೋರಿರುವ ಬಗ್ಗೆ ಪರಿಶೀಲಿಸಲು ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಸದರಿಯವರ ವಿರುದ್ಧ ಯಾವುದಾದರೂ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುವ ಕುರಿತು ಮತ್ತು ಇವರ ಪೂರ್ಣ ವಿಳಾಸದೊಂದಿಗೆ (ಚಿಕ್ಕಬಳ್ಳಾಪುರ ಸ್ಥಳೀಯ ಯೋಜನಾ ಪ್ರದೇಶ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ) ಹಾಗೂ ಪ್ರಮಾಣ ಪತ್ರಗಳ ಪ್ರತಿಗಳನ್ನು ಪರಿಶೀಲಿಸಿ ತಮ್ಮ ಸ್ಪಷ್ಟ ಅಭಿಪ್ರಾಯದೊಂದಿಗೆ ಸಂಬಂಧಪಟ್ಟ ದಾಖಲೆಗಳ ಸಮೇತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಎಂ.ಎಸ್.ಸಂದೀಪ್ ಚಕ್ರವರ್ತಿ ಅವರಿಗೆ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ರೆಡ್ಡಿ ಆರ್., ಮಾಜಿ ಶಾಸಕಿ ಕೆ.ವಿ ಅನಸೂಯಮ್ಮ, ಮೊಹಮ್ಮದ್ ಹಮೀಮ್ ಮತ್ತು ತಂಜೀಮ್ ಅವರನ್ನು ಸದಸ್ಯರನ್ನಾಗಿ ನೇಮಿಸಲು ನಗರಾಭಿವೃದ್ಧಿ ಇಲಾಖೆಯು ಅಭಿಪ್ರಾಯ ಕೇಳಿದೆ.

ಸಂದೀಪ್ ಚಕ್ರವರ್ತಿ ಮತ್ತು ಅನಸೂಯಮ್ಮ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ರಕ್ಷಿತ್ ರೆಡ್ಡಿ ಒಕ್ಕಲಿಗ ಮತ್ತು ಮೊಹಮ್ಮದ್ ಹಮೀಮ್ ಮತ್ತು ತಂಜೀಮ್ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಕೆ.ಎನ್. ಕೇಶವರೆಡ್ಡಿ 2024ರ ಫೆಬ್ರುವರಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿದ್ದರು. ಅಂದಿನಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಮುಂದುವರಿದಿದ್ದರು.

ನಗರಾಭಿವೃದ್ಧಿ ಪ್ರಾಧಿಕಾರದ ನೇಮಕದ ವಿಚಾರವಾಗಿ ಶಾಸಕರ ಮಾತೇ ಅಂತಿಮವಾಗುತ್ತದೆ. ಶಾಸಕರ ಶಿಫಾರಸ್ಸಿನ ಮೇರೆಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಲಾಗುತ್ತದೆ. ಶಾಸಕ ಪ್ರದೀಪ್ ಈಶ್ವರ್, ಸಂದೀಪ್ ಚಕ್ರವರ್ತಿ ಅವರ ನೇಮಕಕ್ಕೆ ಒಲವು ತೋರಿದ್ದಾರೆ ಎನ್ನುತ್ತವೆ ಮೂಲಗಳು.

ಮೊಹಮ್ಮದ್ ಹಮೀಮ್, ಪ್ರದೀಪ್ ಈಶ್ವರ್ ಬೆಂಬಲಿಗರಾಗಿದ್ದು ಈಗಾಗಲೇ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದಾರೆ. ಅವರನ್ನು ಮುಂದುವರಿಸಲು ಶಾಸಕರು ಆಸಕ್ತಿ ತೋರಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ