ಗೌರಿಬಿದನೂರು: ನಗರದಲ್ಲಿ ಪಾದಚಾರಿ ಮಾರ್ಗ ಮಾಯ

ಗೌರಿಬಿದನೂರು: ನಗರದಲ್ಲಿ ಪಾದಚಾರಿ ಮಾರ್ಗ ಮಾಯ

ಗೌರಿಬಿದನೂರು: ನಗರದಲ್ಲಿ ಪಾದಚಾರಿ ಮಾರ್ಗ ಮಾಯ

ಗೌರಿಬಿದನೂರು: ನಗರದಲ್ಲಿರುವ ಪಾದಚಾರಿ ಮಾರ್ಗಗಳು ಅನ್ಯ ಚಟುವಟಿಕೆಗಳಿಗೆ ಬಳಕೆಯಾಗಿವೆ. ಕೆಲವೆಡೆ ಬೈಕ್, ಕೆಟ್ಟ ಕಾರುಗಳ ನಿಲುಗಡೆ ತಾಣವಾಗಿ ಮಾರ್ಪಟ್ಟಿದ್ದರೆ, ಮತ್ತೆ ಕೆಲವೆಡೆಗಳಲ್ಲಿ ಎಲೆಕ್ಟ್ರಾನಿಕ್ಸ್ ಸೇರಿದಂತೆ ಇನ್ನಿತರ ವಸ್ತುಗಳ ಪ್ರದರ್ಶನದ ತಾಣವಾಗಿ ಮಾರ್ಪಟ್ಟಿದೆ. ಇದರಿಂದಾಗಿ ನಗರದಲ್ಲಿ ಪಾದಚಾರಿ ಮಾರ್ಗವೇ ಮಾಯವಾಗಿದೆ.

ಸುರಕ್ಷಿತ ಪಾದಚಾರಿ ಮಾರ್ಗದಲ್ಲಿ ಓಡಾಡುವುದು ಜನರ ಸಂವಿಧಾನಿಕ ಹಕ್ಕು. ವಾಹನ ಸಂಚಾರಕ್ಕಿಂತಲೂ ಪಾದಚಾರಿ ಮಾರ್ಗಕ್ಕೆ ಆದ್ಯತೆ ನೀಡಬೇಕು. ಪ್ರತ್ಯೇಕ ಮತ್ತು ಸುಸ್ಥಿತಿಯಲ್ಲಿರುವ ಪಾದಚಾರಿ ಮಾರ್ಗವು ನಾಗರಿಕರ ಪ್ರಮುಖ ಹಕ್ಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ನಿಟ್ಟಿನಲ್ಲಿ ಪಾದಚಾರಿ ರಸ್ತೆ ಒತ್ತುವರಿ ತೆರವುಗೊಳಿಸಲು ಪೊಲೀಸ್ ಇಲಾಖೆ ಮತ್ತು ನಗರಸಭೆಯು 15 ದಿನ ಗಡುವು ನೀಡಿತ್ತು.

ಆದರೆ ಕೊಟ್ಟ ಗಡುವು ಮೀರಿದರೂ, ಈವರೆಗೆ ಯಾರೂ ಕೂಡ ಅಂಗಡಿ ಮಾಲೀಕರು ಒತ್ತುವರಿ ತೆರವುಗೊಳಿಸಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ನಗರದಲ್ಲಿ ಪ್ರಮುಖ ರಸ್ತೆ ಬದಿಯ ಪಾದಚಾರಿ ರಸ್ತೆಗಳು ಒತ್ತುವರಿಯಾಗಿದ್ದು, ಪಾದಚಾರಿಗಳು ಅನಿವಾರ್ಯವಾಗಿ ಮುಖ್ಯ ರಸ್ತೆಯಲ್ಲೇ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ಬಿ.ಎಚ್. ರಸ್ತೆ, ಎಂ.ಜಿ. ರಸ್ತೆ, ಬಜಾರ್ ರಸ್ತೆ ಸೇರಿದಂತೆ ಬಹುತೇಕ ಪ್ರಮುಖ ರಸ್ತೆಗಳಲ್ಲಿ ಪಾದಚಾರಿಗಳಿಗೆ ಮೀಸಲಾದ ರಸ್ತೆಗಳಲ್ಲಿ ವ್ಯಾಪಾರಸ್ಥರು, ಅಂಗಡಿ ಮತ್ತು ಹೋಟೆಲ್ ಮಾಲೀಕರು, ಮೆಟ್ಟಿಲುಗಳನ್ನು ನಿರ್ಮಿಸಿಕೊಂಡಿದ್ದಾರೆ. ಅದೇ ಜಾಗದಲ್ಲಿ ತಾವು ಮಾರಾಟ ಮಾಡುವ ವಸ್ತುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ಜೊತೆಗೆ ತಮ್ಮ ವಾಹನಗಳನ್ನು ನಿಲ್ಲಿಸಿದ್ದು, ಪಾದಚಾರಿ ರಸ್ತೆಯೇ ಕಾಣದಂತಾಗಿದೆ. ಪಾದಚಾರಿ ರಸ್ತೆಗೆ ಅಳವಡಿಸಿದ್ದ ಕಬ್ಬಿಣದ ಸರಳುಗಳನ್ನು ಸಹ ಬಹುತೇಕ ಕಿತ್ತು ಹಾಕಲಾಗಿದೆ. ರಸ್ತೆ ಬದಿ ವಾಹನಗಳನ್ನು ಅಡ್ಡದಿಡ್ಡಿಯಾಗಿ ನಿಲ್ಲಿಸಲಾಗಿದೆ. ಇದರಿಂದಾಗಿ ಪಾದಚಾರಿಗಳು ಓಡಾಡಲು ಅಸಾಧ್ಯವಾಗಿದೆ. ಮುಖ್ಯರಸ್ತೆಯಲ್ಲೇ ನಡೆದು ಹೋಗುವುದರಿಂದ ಪಾದಚಾರಿಗಳು ಅಪಘಾತಕ್ಕೂ ಸಿಲುಕಿದ್ದಾರೆ ಎಂದು ಸ್ಥಳೀಯರೊಬ್ಬರು ಹೇಳುತ್ತಾರೆ.

ಪಾದಚಾರಿಗಳಿಗೆ ಸರಿಯಾದ ಮಾರ್ಗ ಗುರುತಿಸಬೇಕು. ಪಾದಚಾರಿ ಮಾರ್ಗದಲ್ಲಿ ಪಾದಚಾರಿಗಳಿಗೆ ಬೇಕಾದ ಮೂಲಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ಅಸ್ತಿತ್ವದಲ್ಲಿರುವ ಪಾದಚಾರಿ ಮಾರ್ಗಕ್ಕೆ ಎರಡು ಬದಿ ಅತಿಕ್ರಮಣ ಮಾಡದಂತೆ ಮತ್ತು ವಾಹನಗಳು ಪ್ರವೇಶಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆಗೆ ಸ್ಥಳೀಯರು ಒತ್ತಾಯಿಸುತ್ತಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ