ಮಾಲೂರು| ರಾಜ್ಯ ಸರ್ಕಾರದಲ್ಲಿ ಹೆಚ್ಚಾದ ಭ್ರಷ್ಟಾಚಾರ: ಜೆಡಿಎಸ್ ಆರೋಪ

ಮಾಲೂರು| ರಾಜ್ಯ ಸರ್ಕಾರದಲ್ಲಿ ಹೆಚ್ಚಾದ ಭ್ರಷ್ಟಾಚಾರ: ಜೆಡಿಎಸ್ ಆರೋಪ

ಮಾಲೂರು| ರಾಜ್ಯ ಸರ್ಕಾರದಲ್ಲಿ ಹೆಚ್ಚಾದ ಭ್ರಷ್ಟಾಚಾರ: ಜೆಡಿಎಸ್ ಆರೋಪ

ಮಾಲೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಆರೋಪಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರಂಭದಲ್ಲಿ ಎಲ್ಲರಿಗೂ ಗೃಹಲಕ್ಷ್ಮಿ ಸೇರಿದಂತೆ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ನಂಬಿಸಿದ್ದ ಸರ್ಕಾರ, ಇದೀಗ ನಾನಾ ಷರತ್ತು ವಿಧಿಸಿ ಶೇ 50 ರಷ್ಟು ಜನರಿಗೂ ಯೋಜನೆ ತಲುಪಿಸದೆ ವಂಚಿಸುತ್ತಿದೆ’ ಎಂದು ಆರೋಪಿಸಿದರು.

ಉಚಿತ ವಿದ್ಯುತ್ ನೀಡುವ ನೆಪದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ 2 ರಿಂದ 3 ಗಂಟೆಯೂ ವಿದ್ಯುತ್ ನೀಡುತ್ತಿಲ್ಲ. ಜೊತೆಗೆ ನಿರಂತರ ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದರು.

ನೀರಾವರಿ, ಶಾಶ್ವತ ಕುಡಿವ ನೀರಿನ ಬಿಕ್ಕಟ್ಟು, ರೈತರ ಸಂಕಷ್ಟ ಹಾಗೂ ಸರ್ಕಾರದ ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಜಾಗೃತಿ ಮೂಡಿಸಲು ಸೆ.19ರಂದು ವೈಟ್ ಗಾರ್ಡನ್‌ನಲ್ಲಿ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇತರರು ಭಾಗವಹಿಸಲಿದ್ದಾರೆ ಎಂದರು.

ಆರ್.ಪ್ರಭಾಕರ್, ರಾಮೇಗೌಡ, ಬಲ್ಲಹಳ್ಳಿ ನಾರಾಯಣಸ್ವಾಮಿ, ವೆಂಕಟೇಶಗೌಡ, ದಿನೇಶ್ ಗೌಡ, ಬಿ.ಆರ್.ವೆಂಕಟೇಶ್, ಆರ್.ರವಿ, ಮೈಲಾಂಡಹಳ್ಳಿ ನಾರಾಯಣಸ್ವಾಮಿ, ಕುಟ್ಟಿ, ರಾಮಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ