ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸೋಮವಾರ ಆದೇಶಿಸಿರುವ ಸುಪ್ರೀಂ ಕೋರ್ಟ್‌, ಮೂರು ತಿಂಗಳ ಗಡುವು ನೀಡಿದೆ.

ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ), ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ, ಸೌಜನ್ಯಾ ತಾಯಿ ಕುಸುಮಾವತಿ ಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿದ್ದ ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಆ ಬಳಿಕ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಕಳಪೆ ಹಾಗೂ ಸ್ವತಂತ್ರವಲ್ಲದ ಪರಾವಲಂಬಿ ತನಿಖೆ ನಡೆಸಲಾಗಿದೆ ಎಂದು ಸಿಬಿಐಗೆ ಜುಲೈನಲ್ಲಿ ತರಾಟೆ ತೆಗೆದುಕೊಂಡಿದ್ದ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿತ್ತು.

‘ವಾಸ್ತವವಾಗಿ, ಸಿಬಿಐನ ತನಿಖಾ ಅಧಿಕಾರಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದಾರೆ. ಹಿಂದೆ ಸಂಗ್ರಹಿಸಿದ ಸಾಕ್ಷ್ಯಗಳನ್ನು ಪರಿಶೀಲಿಸಿ ಅವರು ತಮ್ಮ ವರದಿ ಸಲ್ಲಿಸಿದ್ದಾರೆ. ಅವರು ಯಾವುದೇ ಸ್ವತಂತ್ರ ತನಿಖೆ ನಡೆಸಿಲ್ಲ’ ಎಂದು ನ್ಯಾಯಮೂರ್ತಿಗಳಾದ ಸಂಜಯ್‌ ಕುಮಾರ್‌ ಹಾಗೂ ಸಂಜೀವ್‌ ಸಚ್‌ದೇವ್‌ ಅವರಿದ್ದ ಪೀಠ ಹೇಳಿತ್ತು.

‘ಇದು ಸಿಬಿಐನ ಕೆಟ್ಟ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ’ ಎಂದು ಹೇಳಿ ತೀರ್ಪು ಕಾಯ್ದಿರಿಸಿತ್ತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ