ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೂರವಾಣಿ ಕರೆ ಸೇವೆ ಮೇಲ್ದರ್ಜೆಗೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೂರವಾಣಿ ಕರೆ ಸೇವೆ ಮೇಲ್ದರ್ಜೆಗೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೂರವಾಣಿ ಕರೆ ಸೇವೆ ಮೇಲ್ದರ್ಜೆಗೆ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೂರವಾಣಿ ಮೂಲಕ ಮಾಹಿತಿ ನೀಡುವ ಸೇವೆಯನ್ನು ಮತ್ತಷ್ಟು ಸುಧಾರಿಸಲು ಕೆಐಎಎಲ್ ಮುಂದಾಗಿದೆ.

ವಿಮಾನಗಳ ಸಮಯ, ವಿಮಾನ ನಿಲ್ದಾಣದ ಮಾಹಿತಿ, ಕಳೆದುಹೋದ ವಸ್ತುಗಳ ಮಾಹಿತಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಪ್ರಯಾಣಿಕರು ಈಗ ದೂರವಾಣಿ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ಈ ಸೇವೆಯನ್ನು ಸ್ವಯಂಚಾಲಿತಗೊಳಿಸುವ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಸದ್ಯ 080-6678555 ಹಾಗೂ 080-47406666 ಸಂಖ್ಯೆಗಳ ಮೂಲಕ ಪ್ರಯಾಣಿಕರ ಕರೆಗಳನ್ನು ಸ್ವೀಕರಿಸಲಾಗುತ್ತಿದೆ. ಈಗಿನ ವ್ಯವಸ್ಥೆಯಲ್ಲಿ ದಿನಕ್ಕೆ ಗರಿಷ್ಠ 400 ಕರೆಗಳು ಹಾಗೂ ಹೆಚ್ಚು ಒತ್ತಡದ ಸಮಯದಲ್ಲಿ ಗಂಟೆಗೆ 100 ಕರೆಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿದೆ.

ಮುಂದಿನ ಐದು ವರ್ಷಗಳಲ್ಲಿ ಪ್ರಯಾಣಿಕರ ಸಂಚಾರ ಸುಮಾರು ಶೇ 50ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದ ದಿನಕ್ಕೆ ಕನಿಷ್ಠ 600 ಕರೆಗಳು ಮತ್ತು ಹೆಚ್ಚು ಒತ್ತಡದ ಸಮಯದಲ್ಲಿ ಗಂಟೆಗೆ 150 ಕರೆಗಳನ್ನು ನಿರ್ವಹಿಸುವ ಸಾಮರ್ಥ್ಯ ಹೊಂದುವಂತೆ ಹೊಸ ವ್ಯವಸ್ಥೆ ರೂಪಿಸಲಾಗುತ್ತಿದೆ.

ಹೊಸ ವ್ಯವಸ್ಥೆಯಿಂದ ಕರೆಗಳಿಗೆ ಉತ್ತರಿಸುವ ಸಿಬ್ಬಂದಿಯ ಕೆಲಸದ ಒತ್ತಡವೂ ಕಡಿಮೆಯಾಗಲಿದೆ. ಮೊದಲ ಹಂತದಲ್ಲಿ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಿ, ಅಗತ್ಯ ವ್ಯವಸ್ಥೆಗಳನ್ನು ಒದಗಿಸುವ ಕೆಲಸವನ್ನು ಹೊರಗಿನ ಸಂಸ್ಥೆಯೊಂದಕ್ಕೆ ವಹಿಸಲಾಗುತ್ತದೆ. ಹೊಸ ವ್ಯವಸ್ಥೆಯಲ್ಲಿ ಸಾಮಾನ್ಯ ಸಮಸ್ಯೆಗಳಿಗೆ ಎರಡು ಗಂಟೆಯೊಳಗೆ, ತುರ್ತು ಸಮಸ್ಯೆಗಳಿಗೆ 15 ನಿಮಿಷದೊಳಗೆ ಮತ್ತು ಕಡಿಮೆ ಆದ್ಯತೆಯ ಸಮಸ್ಯೆಗಳಿಗೆ 48 ಗಂಟೆಯೊಳಗೆ ಸ್ಪಂದಿಸುವ ಗುರಿ ಹೊಂದಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ