
ಕೋಲ್ಕತ್ತ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಬೆಂಗಳೂರಿನಲ್ಲಿ ಆರೋಪಿ ಸೆರೆ
ಕೋಲ್ಕತ್ತ (ಪಿಟಿಐ): ಇಲ್ಲಿನ ಆರ್–ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ಅಂತಿಮ ಸಂಸ್ಕಾರವನ್ನು ತರಾತುರಿಯಲ್ಲಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಟಿಎಂಸಿ ನಾಯಕ ಸೋಮನಾಥ್ ಡೇ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಪಾನೀಹಾಟಿ ಸ್ಥಳೀಯ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಡೇ, ತನಿಖೆ ಶುರುವಾದಾಗಿನಿಂದ ತಲೆಮರೆಸಿಕೊಂಡಿದ್ದರು. ಪಾನೀಹಾಟಿ ಕ್ಷೇತ್ರದ, ಟಿಎಂಸಿಯ ಮಾಜಿ ಶಾಸಕ ನಿರ್ಮಲ್ ಘೋಷ್ ಮತ್ತು ಸಂಜೀವ್ ಮುಖರ್ಜಿ ಎಂಬುವವರನ್ನೂ ಬಂಧಿಸಲಾಗಿತ್ತು ಮತ್ತು ಅವರು ಜಾಮೀನು ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260904-51-400458050
Tags
Nation