
ಕಾರಂತ ಹುಟ್ಟೂರ ಪ್ರಶಸ್ತಿಗೆ ಎ.ಎಸ್.ಎನ್.ಹೆಬ್ಬಾರ್, ರಾಹುಲ್ ದೇವರಾಜ್ ಆಯ್ಕೆ
ಬ್ರಹ್ಮಾವರ: ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ಆಶ್ರಯದಲ್ಲಿ ನೀಡಲಾಗುವ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಎ.ಎಸ್.ಎನ್.ಹೆಬ್ಬಾರ್, ವಾಗ್ಮಿ ರಾಹುಲ್ ದೇವರಾಜ್ ಶಿವಮೊಗ್ಗ ಆಯ್ಕೆಯಾಗಿದ್ದಾರೆ.
20 ವರ್ಷಗಳಿಂದ ಶಿವರಾಮ ಕಾರಂತರು ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಈ ಪುರಸ್ಕಾರ ನೀಡುತ್ತಾ ಬರಲಾಗಿದೆ.
ಶಿವರಾಮ ಕಾರಂತರ ಜನ್ಮದಿನವಾದ ಅ. 10ರಂದು ಮಧ್ಯಾಹ್ನ 3ಕ್ಕೆ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ. ಕುಂದರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಆಯ್ಕೆ ಸಮಿತಿಯ ಸಂಚಾಲಕ ಯು.ಎಸ್.ಶೆಣೈ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.