ವಿದ್ಯಾರ್ಥಿಗಳ ಹಣೆ ಮೇಲಿನ ತಿಲಕ ಅಳಿಸಿದ ಆರೋಪ: ಶಾಲಾ ಶಿಕ್ಷಕನ ಅಮಾನತು

ವಿದ್ಯಾರ್ಥಿಗಳ ಹಣೆ ಮೇಲಿನ ತಿಲಕ ಅಳಿಸಿದ ಆರೋಪ: ಶಾಲಾ ಶಿಕ್ಷಕನ ಅಮಾನತು

ವಿದ್ಯಾರ್ಥಿಗಳ ಹಣೆ ಮೇಲಿನ ತಿಲಕ ಅಳಿಸಿದ ಆರೋಪ: ಶಾಲಾ ಶಿಕ್ಷಕನ ಅಮಾನತು

ಕೋಲ್ಕತ್ತ: ವಿದ್ಯಾರ್ಥಿಗಳ ಹಣೆ ಮೇಲಿನ ಗಂಧ (ತಿಲಕ) ಅಳಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಸೂಚನೆಯಂತೆ ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಣೆ ಮೇಲಿನ ಗಂಧವನ್ನು ಶಿಕ್ಷಕನು ಪ್ರತಿ ಬಾರಿಯೂ ಒರೆಸುತ್ತಿದ್ದರು ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ಬೆನ್ನಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಡಿಯೊ ಹರಿದಾಡಿದ ಬಳಿಕ ಧಾರ್ಮಿಕ ವಿವಾದಕ್ಕೆ ಕಾರಣವಾಗಿದೆ. ಸರ್ಕಾರವು ಈ ವಿಷಯವನ್ನು ಪರಿಶೀಲಿಸಿ ಆ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದರು. ಅಲ್ಲದೆ ಅವರು ಪ್ರಧಾನಿ ಮೋದಿ ಅವರ ಕುರಿತು ನಿಂದಿಸಿ ಪೋಸ್ಟ್ ಹಂಚಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. 

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವಸುವೇಂದು, ‘ಮೋದಿ ಮಾತ್ರವಲ್ಲ ಯಾವುದೇ ಉನ್ನತ ಹುದ್ದೆಯಲ್ಲಿರುವವರ ಬಗ್ಗೆ ನಿಂದನೆ ಮಾಡುವುದನ್ನು ಸಹಿಸುವುದಿಲ್ಲ. ಸರ್ಕಾರಿ ನೌಕರರು ಸರ್ಕಾರದ ಯಾವುದೇ ನೀತಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ