ಗದಗಕ್ಕೆ ಸಮರ್ಪಕವಾಗಿ ನೀರು ಪೂರೈಕೆಗೆ ಆಗ್ರಹ: ಹೋಮ‌ ನೆರವೇರಿಸಿ ಬಿಜೆಪಿ ಆಕ್ರೋಶ

ಗದಗಕ್ಕೆ ಸಮರ್ಪಕವಾಗಿ ನೀರು ಪೂರೈಕೆಗೆ ಆಗ್ರಹ: ಹೋಮ‌ ನೆರವೇರಿಸಿ ಬಿಜೆಪಿ ಆಕ್ರೋಶ

ಗದಗಕ್ಕೆ ಸಮರ್ಪಕವಾಗಿ ನೀರು ಪೂರೈಕೆಗೆ ಆಗ್ರಹ: ಹೋಮ‌ ನೆರವೇರಿಸಿ ಬಿಜೆಪಿ ಆಕ್ರೋಶ

ಗದಗ: ಗದಗ-ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕವಾಗಿ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದ ಹುಯಿಲಗೋಳ ನಾರಾಯಣರಾವ ವೃತ್ತದಲ್ಲಿ ಹೋಮ ನೆರವೇರಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಸಮರ್ಪಕವಾಗಿ ನೀರು ಪೂರೈಸದೆ ಶಾಸಕ ಎಚ್.ಕೆ. ಪಾಟೀಲ ಅವರು ಅವಳಿ ನಗರಕ್ಕೆ ಅನ್ಯಾಯ ಮಾಡಿದ್ದಾರೆ. ಇನ್ನೊಂದು ವಾರದಲ್ಲಿ ನೀರು ಪೂರೈಸದಿದ್ದರೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನಾನಿರತರು ಖಾಲಿ ಕೊಡಗಳನ್ನು ಪ್ರದರ್ಶಿಸಿದರು. ತಮಟೆ, ಹಲಗಿ ಬಾರಿಸುತ್ತ, ಮಹಾತ್ಮ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ, ನೀರು ಪೂರೈಕೆಯ ಭರವಸೆ ನೀಡುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪಟ್ಟು ಹಿಡಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ