ಮೈಸೂರು ದಸರಾ ನಿಶಾನೆ ಆನೆಯಾಗಿ ಅಭಿಮನ್ಯು: ಮಾಜಿ ಅರಣ್ಯ ಸಚಿವರ ಮನವಿಗೆ ಸ್ಪಂದನೆ

ಮೈಸೂರು ದಸರಾ ನಿಶಾನೆ ಆನೆಯಾಗಿ ಅಭಿಮನ್ಯು: ಮಾಜಿ ಅರಣ್ಯ ಸಚಿವರ ಮನವಿಗೆ ಸ್ಪಂದನೆ

ಮೈಸೂರು ದಸರಾ ನಿಶಾನೆ ಆನೆಯಾಗಿ ಅಭಿಮನ್ಯು: ಮಾಜಿ ಅರಣ್ಯ ಸಚಿವರ ಮನವಿಗೆ ಸ್ಪಂದನೆ

ಮೈಸೂರು: ಮೈಸೂರು ದಸರಾದಲ್ಲಿ ಅಭಿಮನ್ಯು ಆನೆ ನಿಶಾನೆ ಆನೆಯಾಗಿ ಭಾಗವಹಿಸಲಿದೆ ಎಂದು ಅರಣ್ಯ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ.

25 ವರ್ಷ ದಸರಾದಲ್ಲಿ ಭಾಗವಹಿಸಿ, 6 ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯು ಆನೆಯನ್ನು ಈ ಬಾರಿ ದಸರಾ ಆನೆಗಳ ಪಟ್ಟಿಯಿಂದ ವಯಸ್ಸಿನ ಕಾರಣಕ್ಕೆ ಕೈಬಿಡಲಾಗಿತ್ತು. ಇದಕ್ಕೆ ಅಭಿಮನ್ಯು ಆನೆ ಅಭಿಮಾನಿಗಳು ದಸರಾ ಜಂಬೂಸವಾರಿಗೆ ಅಭಿಮನ್ಯುವನ್ನು ಕರೆತರಬೇಕು ಎಂದು ಅಭಿಯಾನ ಆರಂಭಿಸಿದ್ದರು. ಪ್ರತಿಭಟನೆಯನ್ನೂ ನಡೆಸಿದ್ದರು. ಜನರ ಒತ್ತಾಯಕ್ಕೆ ಮಣಿದ ಸಚಿವರು ಅಭಿಮನ್ಯು ಜಂಬೂಸವಾರಿಯಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.

ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದರು.

ಈ ಸಂಬಂಧ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿದ್ದ ಅವರು, ದಸರಾ ಮಹೋತ್ಸವದಲ್ಲಿ ನಾಡದೇವಿ ಚಾಮುಂಡೇಶ್ವರಿ ವಿರಾಜಮಾನಳಾದ 750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಅಭಿಮನ್ಯುವಿಗೆ ನಾಡಿನಾದ್ಯಂತ ದೊಡ್ಡ ಅಭಿಮಾನಿ ಬಳಗವೇ ಇದೆ. ಏಕಾ ಏಕಿ ಅಭಿಮನ್ಯುವನ್ನು ದಸರಾ ಮಹೋತ್ಸವದಿಂದ ಹೊರಗಿಡುವ ಬದಲು ನಿಶಾನೆ ಆನೆಯಾಗಿ ಬಳಸಿ, ಗೌರವಪೂರ್ವಕವಾಗಿ ಹಾಗೂ ರಾಜೋಚಿತವಾಗಿ ಬೀಳ್ಕೊಡುಗೆ ನೀಡಬೇಕು ಎಂದು ಕೋರಿದ್ದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯೇ ವಿಜಯದಶಮಿ ಜಂಬೂಸವಾರಿ. ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಬಗ್ಗೆ ರಾಜ್ಯದ ಜನತೆಗೆ ಅವಿನಾಭಾವ ಸಂಬಂಧವಿದೆ. ಚಿನ್ನದಂಬಾರಿ ಹೊರುವ ಆನೆಗಳ ಬಗ್ಗೆಯಂತೂ ವಿಶೇಷ ಪ್ರೀತಿ ಇದೆ. ಬಾರಿ ದಸರಾ ಮಹೋತ್ಸವದಿಂದ ಕ್ಯಾಪ್ಟನ್ ಅಭಿಮನ್ಯುವನ್ನು ಕೈಬಿಟ್ಟಿರುವುದು ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ ಎಂದು ಪತ್ರದಲ್ಲಿ ತಿಳಿಸಿದ್ದರು.

ನಾಗರಹೊಳೆಯ ಮತ್ತಿಗೋಡು ಶಿಬಿರದ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವುದಲ್ಲದೆ, 6 ಬಾರಿ ಅಂಬಾರಿಹೊತ್ತು ರಾಜ್ಯದ ಜನರ ಹೃದಯದಲ್ಲಿ ನೆಲೆಸಿದ್ದಾನೆ ಎಂದೂ ಈಶ್ವರ ಖಂಡ್ರೆ ಹೇಳಿದ್ದರು.

1968ರಲ್ಲಿ ಕಾಕನಕೋಟೆ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತಿದ್ದ. 60 ವರ್ಷ ತುಂಬಿದ ಬಳಿಕವೂ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ. ಅದೇ ರೀತಿ ಬಲರಾಮ ಕೂಡ ಪಾಲ್ಗೊಂಡಿದ್ದ. ಈ ಗೌರವವನ್ನು ಅಭಿಮನ್ಯುವಿಗೂ ನೀಡಿ, ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡುವಂತೆ ಕೋರಿದ್ದರು.

ಖಂಡ್ರೆ ಅವರ ಮನವಿ ಹಿನ್ನೆಲೆಯಲ್ಲಿ ಈ ಬಾರಿಯ ಗಜಪಯಣದ ವೇಳೆ ಅಭಿಮನ್ಯುವಿಗೆ ಗೌರವಯುತ ಬೀಳ್ಕೊಡುಗೆ ನೀಡಲಾಗಿತ್ತು. ಈಗ ದಸರಾ ಗಜಪಡೆ ತಂಡಕ್ಕೆ ಸೇರಿಸಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ