ಕೋಲಾರ: ಚೆನ್ನೈ–ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ, ನಾಲ್ವರ ಸಾವು
ಕೆಜಿಎಫ್ (ಕೋಲಾರ): ತಾಲ್ಲೂಕಿನ ದೊಡ್ಡಕಾರಿ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇ ಕಾರಿಡಾರ್‌ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.
ಬೆಂಗಳೂರಿನ ವಿದ್ಯಾರಣ್ಯಪುರದ ಶಾರದಮ್ಮ(70), ದೀಕ್ಷಿತಾ (25), ದೇವೇಂದ್ರ ಕುಮಾರ್ (41), ಜಿಷ್ಣು (13) ಮೃತರು. ಕಾರಿನಲ್ಲಿದ್ದ ಚಾಲಕ ವಿಕಾಸ್, ನೀತು, ಆದ್ವಿಕ, ಕವಿತಾ ಗಾಯಾಳುಗಳು. ಇವರನ್ನು ಬಂಗಾರಪೇಟೆ, ಕೋಲಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕನ ನಿಯಂತ್ರಣ ತಪ್ಪಿ ಟೊಯೊಟಾ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದೆ.
ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.