ಕಾರ್ಯನಿರ್ವಹಿಸದ ವಿದ್ಯುತ್ ಬೀದಿ ದೀಪಗಳು: ಕಾರ್ಯಪಾಲಕ ಎಂಜಿನಿಯರ್ ರಮೇಶ್ ಅಮಾನತು

ಕಾರ್ಯನಿರ್ವಹಿಸದ ವಿದ್ಯುತ್ ಬೀದಿ ದೀಪಗಳು: ಕಾರ್ಯಪಾಲಕ ಎಂಜಿನಿಯರ್ ರಮೇಶ್ ಅಮಾನತು

ಕಾರ್ಯನಿರ್ವಹಿಸದ ವಿದ್ಯುತ್ ಬೀದಿ ದೀಪಗಳು: ಕಾರ್ಯಪಾಲಕ ಎಂಜಿನಿಯರ್ ರಮೇಶ್ ಅಮಾನತು

ಬೆಂಗಳೂರು: ಕೇಂದ್ರ ನಗರ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ (ವಿದ್ಯುತ್) ಎಚ್. ವಿ. ರಮೇಶ್ ಅವರನ್ನು ಅಮಾನತು ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು ಹಡ್ಸನ್ ವೃತ್ತದಿಂದ ಚಾಲುಕ್ಯ ವೃತ್ತದವರೆಗಿನ ರಸ್ತೆಯಲ್ಲಿ ಖುದ್ದಾಗಿ ವಿದ್ಯುತ್ ಬೀದಿ ದೀಪಗಳ ಪರಿವೀಕ್ಷಣೆ ಮಾಡುವ ಸಂದರ್ಭದಲ್ಲಿ ಒಟ್ಟು 222 ಪೈಕಿ 140 ವಿದ್ಯುತ್ ಕಂಬಗಳಲ್ಲಿನ ದೀಪಗಳು ಕಾರ್ಯನಿರ್ವಹಿಸದಿರುವುದು ಕಂಡು ಬಂದಿತ್ತು. ಈ ಬಗ್ಗೆ ರಮೇಶ್ ಕ್ರಮ ತೆಗೆದುಕೊಂಡಿರಲಿಲ್ಲ.

ಸಚಿವರ ಸೂಚನೆ-ನಿರ್ದೇಶನಗಳನ್ನು ಗಂಭೀರವಾಗಿ ತೆಗೆದುಕೊಳ್ಳದ ಕಾರಣ ಕರ್ತವ್ಯಲೋಪಕ್ಕೆ ಸಂಬಂಧಿಸಿದಂತೆ ತತ್ ಕ್ಷಣಕ್ಕೆ ಜಾರಿಯಾಗುವಂತೆ ರಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260902-4-845339209

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ