ವೃಷಭಾವತಿ ನೀರು ಶುದ್ಧೀಕರಿಸಿ ಕೆರೆ ತುಂಬಿಸಿ; ರೈತ ಮುಖಂಡರ ಒತ್ತಾಯ

ವೃಷಭಾವತಿ ನೀರು ಶುದ್ಧೀಕರಿಸಿ ಕೆರೆ ತುಂಬಿಸಿ; ರೈತ ಮುಖಂಡರ ಒತ್ತಾಯ

ವೃಷಭಾವತಿ ನೀರು ಶುದ್ಧೀಕರಿಸಿ ಕೆರೆ ತುಂಬಿಸಿ; ರೈತ ಮುಖಂಡರ ಒತ್ತಾಯ

ಬೆಂಗಳೂರು: ವೃಷಭಾವತಿ ನೀರನ್ನು ಶುದ್ದೀಕರಿಸಿ ಮಾಗಡಿ ತಾಲ್ಲೂಕು ಹಾಗೂ ತುಮಕೂರು ಜಿಲ್ಲೆಯ ಕೆರೆಗಳನ್ನು ತುಂಬಿಸಬೇಕು ಎಂದು ರೈತ ಮುಖಂಡ ಎನ್‌.ಯೋಗೇಶ್‌ ಅವರು ಒತ್ತಾಯಿಸಿದ್ದಾರೆ.

ಈ ಭಾಗದಲ್ಲಿ ಅಂತರ್ಜಲ ಕುಸಿದಿದೆ. 1200, 1300 ಅಡಿ ಆಳದವರೆಗೆ ಕೊಳವೆಬಾವಿ ಕೊರೆದರೂ ನೀರು ಸಿಗುವುದಿಲ್ಲ. ಇದರಿಂದಾಗಿ ಬೆಳೆಗಳಿಗೆ ನೀರು ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಧಾವಿಸುವ ಉದ್ದೇಶದಿಂದ ಕೆರೆ ತುಂಬಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಕೃಷಿಗಾಗಿ ರೈತರು ಕೊಳವೆಬಾವಿಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಮಳೆ ಕೊರತೆಯಿಂದಾಗಿ ಅಂತರ್ಜಲ ಕುಸಿದಿದ್ದು ಕೊಳವೆಬಾವಿಗಳು ಬತ್ತಿ ಹೋಗಿವೆ. ಮಳೆ ಇಲ್ಲದ ಕಾರಣ ಬೆಳೆಗಳು ಒಣಗುತ್ತಿವೆ. ರೈತರ ಅನುಕೂಲಕ್ಕಾಗಿ ಕುಂಬಳಗೋಡು, ವೃಷಭಾವತಿನೀರನ್ನು ಶುದ್ಧೀಕರಿಸಿ ಕೆರೆಗಳನ್ನು ತುಂಬಿಸಿದರೆ ರೈತರಿಗೆ ಅನುಕೂಲ ವಾಗುತ್ತದೆ ಎಂದು ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ