
ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಅರೆಭಾಷೆ ಗೌಡ ಸಮಾಜ ನಿರ್ಣಯ
ಶನಿವಾರಸಂತೆ: ಕಸ್ತೂರಿ ರಂಗನ್ ವರದಿಯಲ್ಲಿನ ನಿಯಮಗಳಿಂದ ರೈತರಿಗೆ, ಜನರಿಗೆ, ನಿವಾಸಿಗಳಿಗೆ ಬಾಧಕಗಳು ಹೆಚ್ಚಾಗಿರುವುದ್ದರಿಂದ ವರದಿಯ 7ನೇ ಕರಡು ಅಧಿಸೂಚನೆಯನ್ನು ತಿರಸ್ಕರಿಸಲಾಗುವುದು ಎಂದು ಇಲ್ಲಿಗೆ ಸಮೀಪದ ಆಲೂರು ಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಮಾಸಿಕ ಸಭೆಯಲ್ಲಿ ನಿರ್ಣಯಿಸಲಾಯಿತು.
ಸಂಗಯನಪುರದ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಅಧ್ಯಕ್ಷತೆಯಲ್ಲಿ ಈಚೆಗೆ ಸಭೆ ನಡೆಯಿತು.
ಸಭೆಯಲ್ಲಿ ಸಂಘದ ಬೆಳವಣಿಗೆ, ಸಮಾಜದ ವತಿಯಿಂದ ಮುಂದೆ ನಡೆಯುವ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಕಸ್ತೂರಿರಂಗನ್ ವರದಿಯ 7ನೇ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ಕುರಿತು ಸಮಾಜದ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲೂ ಸಭೆಯಲ್ಲಿ ನಿರ್ಣಯಿಸಲಾಯಿತು.
ಈ ವೇಳೆ ಈಚೆಗೆ ನಿವೃತ್ತಗೊಂಡ ಆಲೂರು ಸಿದ್ದಾಪುರ ಕೃಷಿ ಪತ್ತಿನ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಮಾಜದ ಆಡಳಿತ ಮಂಡಳಿ ಪದಾಧಿಕಾರಿ ಪಿ.ಎಸ್.ಲೀಲಾಕುಮಾರ್ ಅವರನ್ನು ಸಮಾಜದ ವತಿಯಿಂದ ಗೌರವಿಸಲಾಯಿತು.
ಸಭೆಯಲ್ಲಿ ಗೌಡ ಸಮಾಜದ ಕಾರ್ಯದರ್ಶಿ ಜಯಕುಮಾರ್ ಸೇರಿ ದಂತೆ ಸಮಾಜದ ಪದಾಧಿಕಾರಿಗಳು, ಪ್ರಮುಖರು, ಪಾಲ್ಗೊಂಡಿದ್ದರು.