ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡಕ್ಕೆ ಅನ್ಯಾಯ; ಪರಿಷ್ಕರಣೆಗೆ ಬಿಳಿಮಲೆ ಆಗ್ರಹ

ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡಕ್ಕೆ ಅನ್ಯಾಯ; ಪರಿಷ್ಕರಣೆಗೆ ಬಿಳಿಮಲೆ ಆಗ್ರಹ

ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡಕ್ಕೆ ಅನ್ಯಾಯ; ಪರಿಷ್ಕರಣೆಗೆ ಬಿಳಿಮಲೆ ಆಗ್ರಹ

ಬೆಂಗಳೂರು: ‘ರಾಜ್ಯ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡಕ್ಕೆ ಅನ್ಯಾಯವಾಗಿದ್ದು,ನಿಯಮಗಳನ್ನು ಪರಿಷ್ಕರಣೆ ಮಾಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

‘ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಸರ್ಕಾರಿ ಇಲಾಖೆಗಳ ಲಿಪಿಕ ವರ್ಗದ ಹುದ್ದೆಗಳ ನೇಮಕಾತಿಗೆ ಆ.19ರಂದು ಕರಡು ನಿಯಮ ಪ್ರಕಟಿಸಿದೆ. ಈ ನಿಯಮಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯ ಪ್ರಭುತ್ವ ಪರೀಕ್ಷೆಗೆ ಸಮಾನ ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಕ್ರಮವು ಗ್ರಾಮೀಣ, ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಮಾರಕವಾಗಿದೆ. ಕನ್ನಡ ನಾಡಿನಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ನಡೆಯುವ ಪರೀಕ್ಷೆಗಳಲ್ಲಿ, ಆಂಗ್ಲ ಭಾಷೆಗೆ ನೀಡಿದ ಪ್ರಾಧಾನ್ಯವನ್ನೇ ಕನ್ನಡಕ್ಕೂ ನೀಡುವುದು ನ್ಯಾಯಸಮ್ಮತವಲ್ಲ’ ಎಂದಿದ್ದಾರೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಮುಖ್ಯಸ್ಥರಿಗೆ ಪತ್ರ ಬರೆದಿರುವ ಅವರು, ‘ಕರಡು ನಿಯಮಗಳ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ತಲಾ 35 ಅಂಕಗಳ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ತೀವ್ರ ಅನ್ಯಾಯವಾಗುವ ಸಾಧ್ಯತೆ ಇದೆ. ಇದು 1963ರ ಕರ್ನಾಟಕ ರಾಜಭಾಷಾ ನೀತಿಯ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260902-4-171973483

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ