ಮಕ್ಕಳಿಗೆ ಮಾನಸಿಕ ಆರೋಗ್ಯ ಮುಖ್ಯ: ತಾಲ್ಲೂಕು ಆರೋಗ್ಯ ಅಧಿಕಾರಿ

ಮಕ್ಕಳಿಗೆ ಮಾನಸಿಕ ಆರೋಗ್ಯ ಮುಖ್ಯ: ತಾಲ್ಲೂಕು ಆರೋಗ್ಯ ಅಧಿಕಾರಿ

ಮಕ್ಕಳಿಗೆ ಮಾನಸಿಕ ಆರೋಗ್ಯ ಮುಖ್ಯ: ತಾಲ್ಲೂಕು ಆರೋಗ್ಯ ಅಧಿಕಾರಿ

ಎಚ್.ಡಿ.ಕೋಟೆ: ವಿದ್ಯಾರ್ಥಿ ಜೀವನದಲ್ಲಿ ಮಾನಸಿಕ ಆರೋಗ್ಯ ಮುಖ್ಯ ಎಂದು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ರವಿ ಕುಮಾರ್ ಟಿ. ಹೇಳಿದರು.

ಶಾಂತಿಪುರ ಬಳಿ ಇರುವ ಚಿತ್ತದಾಮ ಮಾನಸಿಕ ನಿರಾಶ್ರಿತರ ಕೇಂದ್ರದಲ್ಲಿ ಹುಣಸೂರಿನ ಟ್ಯಾಲೆಂಟ್ ಪದವಿ ಪೂರ್ವ ಕಾಲೇಜಿನ ಮಕ್ಕಳಿಗೆ ಆಯೋಜಿಸಿದ ಸಾರ್ವಜನಿಕ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸುವ ಭರಾಟೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಹೊರಬರಲು ಮಾದಕ ವ್ಯಸನಿಗಳಾಗಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಪುಸ್ತಕ ಓದಬೇಕು. ಒಳ್ಳೆಯ ಸ್ನೇಹಿತರ ಸಹವಾಸದಿಂದ ಉತ್ತಮ ವ್ಯಕ್ತಿಗಳಾಗಿ ಬದುಕನ್ನು ಬಂಗಾರ ಮಾಡಿಕೊಳ್ಳಬೇಕು. ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕು ಎಂದು ಕಿವಿಮಾತು ಹೇಳಿದರು.

ಎಚ್.ಡಿ. ಕೋಟೆ ಪೊಲೀಸ್ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ಚಿಕ್ಕನಾಯಕ ಮಾತನಾಡಿ, ಈ ಹಿಂದೆ ವಯಸ್ಸಾದವರು ಮಾದಕ ವ್ಯಸನಿಗಳಾಗುತ್ತಿದ್ದರು. ಇತ್ತೀಚೆಗೆ ದಿನಗಳಲ್ಲಿ ಹದಿಹರೆಯದ ಮಕ್ಕಳು ಮದ್ಯ, ಮಾದಕ ವಸ್ತುಗಳ ಸೇವನೆಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಇದರಿಂದ ದೂರ ಇರಬೇಕು ಎಂದು ಸಲಹೆ ನೀಡಿದರು.

ಚಿತ್ತಧಾಮ ಮಾನಸಿಕ ನಿರಾಶ್ರಿತರ ಕೇಂದ್ರದ ವ್ಯವಸ್ಥಾಪಕ ಮಹಾದೇವಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಓದಿನ ಕಡೆ ಹೆಚ್ಚಿನ ಗಮನ ಹರಿಸಲು ಸಾಧ್ಯ ಎಂದು ಹೇಳಿದರು.

ಚಿತ್ತಧಾಮ ಮಾನಸಿಕ ನಿರಾಶ್ರಿತರ ಕೇಂದ್ರದ ವ್ಯವಸ್ಥಾಪಕ ಮಹಾದೇವಸ್ವಾಮಿ, ಒಳವಾಸಿ ರವಿಕುಮಾರ್, ಟ್ಯಾಲೆಂಟ್ ಪದವಿ ಪೂರ್ವ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿಭಾಗದ ಮುಖ್ಯಸ್ಥ ಜಗದೀಶ್ ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ