ಯೋಗೇಶ್‌ಗೆ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ ಸಾರಥ್ಯ

ಯೋಗೇಶ್‌ಗೆ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ ಸಾರಥ್ಯ

ಯೋಗೇಶ್‌ಗೆ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ ಸಾರಥ್ಯ

ಚಾಮರಾಜನಗರ: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಜೆ.ಯೋಗೇಶ್ ಭಾನುವಾರ ಅಧಿಕಾರ ಸ್ವೀಕರಿಸಿದರು.

ಪಕ್ಷದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಮರಿಸ್ವಾಮಿ ಕಾಂಗ್ರೆಸ್‌ ಧ್ವಜವನ್ನು ಯೋಗೇಶ್ ಅವರಿಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

ಬಳಿಕ ಮಾತನಾಡಿದ ಜೆ.ಯೋಗೇಶ್, ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು. ಕಾಂಗ್ರೆಸ್‌ನ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಲಾಗುವುದು, ಮುಂಬರುವ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಲಾಗುವುದು. ವಿಧಾನಸಭಾ ಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಜಿಲ್ಲೆಯನ್ನು ಕೈವಶ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

‘ಹಿಂದುಳಿದ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಪಕ್ಷದ ನೇತೃತ್ವ ನೀಡಿರುವುದದಕ್ಕೆ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಆಭಾರಿಯಾಗಿದ್ದೇನೆ. ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಲಹೆ ಸೂಚನೆಗಳನ್ನು ಪಡೆದು ಪಕ್ಷವನ್ನು ಮುನ್ನಡೆಸುತ್ತೇನೆ’ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ನೂತನ ಜಿಲ್ಲಾಧ್ಯಕ್ಷರುರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಹಾಗೂ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಲು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಸಂಘಟಿಸಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದ್ದು, ಜನರ ವಿಶ್ವಾಸ ಗಳಿಸಿದ್ದು, ಇದನ್ನು ಪೂರಕವಾಗಿ ಬಳಸಿಕೊಳ್ಳಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಲಾಕ್ ಅದ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಗೆಲುವಿಗೆ ಶ್ರಮಿಸಬೇಕು. ವಿಧಾನಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದರು.

ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶಪ್ರಸಾದ್‌, ಕಾಂಗ್ರೆಸ್ ಪಕ್ಷಕ್ಕೆ ಹಲವು ದಶಕಗಳ ಇತಿಹಾಸವಿದ್ದು, ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ದೇಶ ನಿರ್ಮಾಣಕ್ಕೆ ಕಾಂಗ್ರೆಸ್ ನೀಡಿರುವ ಕೊಡುಗೆಯನ್ನು ಮತದಾರರು ಮರೆಯುವುದಿಲ್ಲ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಪಿ.ಮರಿಸ್ವಾಮಿ, ‘9 ವರ್ಷಗಳ ಕಾಲ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷದ ವರಿಷ್ಠರು, ಮುಖಂಡರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನೂತನ ಅಧ್ಯಕ್ಷರಿಗೆ ಅಗತ್ಯ ಸಹಕಾರ ನೀಡುತ್ತೇನೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಹಾಗೂ ಸಂಘಟನೆಗೆ ಒತ್ತು ನೀಡಲಾಗುವುದು’ ಎಂದರು.

ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ, ನೂತನ ಅಧ್ಯಕ್ಷರು ಪಕ್ಷವನ್ನು ಮತ್ತಷ್ಟು ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.

ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಚಂದ್ರು, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು, ಚಿಕ್ಕಮಹದೇವು, ಜಿಲ್ಲಾ ಘಟಕದ ಅಧ್ಯಕ್ಷೆ ನಾಗರತ್ನ ಕೆಂಗಾಕಿ, ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದನ್, ಮುಖಂಡರಾದ ಕೊಪ್ಪಾಳಿ ಮಹದೇವನಾಯಕ, ಶಿವಕುಮಾರ್, ಬಾಲರಾಜು, ಎಸ್.ಸೋಮನಾಯಕ ಪಾಲ್ಗೊಂಡಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ