ಮಹಿಳೆ ಮೇಲೆ ಹಲ್ಲೆ ಮಾಡಿ ಪಿಎಸ್ಐ ಕಾರಿಗೆ ಬೆಂಕಿ ಹಚ್ಚಿದ ಪೊಲೀಸ್‌ ಕಾನ್ ಸ್ಟೆಬಲ್

ಮಹಿಳೆ ಮೇಲೆ ಹಲ್ಲೆ ಮಾಡಿ ಪಿಎಸ್ಐ ಕಾರಿಗೆ ಬೆಂಕಿ ಹಚ್ಚಿದ ಪೊಲೀಸ್‌ ಕಾನ್ ಸ್ಟೆಬಲ್

ಮಹಿಳೆ ಮೇಲೆ ಹಲ್ಲೆ ಮಾಡಿ ಪಿಎಸ್ಐ ಕಾರಿಗೆ ಬೆಂಕಿ ಹಚ್ಚಿದ ಪೊಲೀಸ್‌ ಕಾನ್ ಸ್ಟೆಬಲ್

ಕಮಲಾಪುರ (ಕಲಬುರಗಿ): ತಾಲ್ಲೂಕಿನ ಮಹಾಗಾಂವ ಕ್ರಾಸ್‌ನಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ ಒಬ್ಬರು ಮಹಿಳೆಯ ಮೇಲೆ ನಡುಬೀದಿಯಲ್ಲೇ ಹಲ್ಲೆ ನಡೆಸಿ, ಬಂಡೆಗಲ್ಲಿನಿಂದ ಮನೆಯ ಬಾಗಿಲು ಮುರಿದು ಒಳನುಗ್ಗಿ, ಚಿಂದಿ ಬಟ್ಟೆ ಹಾಗೂ ಪ್ಲಾಸ್ಟಿಕ್‌ ಕಾಗದಗಳಿಗೆ ಬೆಂಕಿ ಹಚ್ಚಿದ ಘಟನೆ ಸೆ.13ರಂದು ನಡೆದಿದೆ.

ಚಿಂಚೋಳಿ ಠಾಣೆಯ ಕಾನ್‌ಸ್ಟೆಬಲ್‌ ರಾಜಶೇಖರ ವರನಾಳ ಕೃತ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಅವರು ಈ ಹಿಂದೆ ಮಹಾಗಾಂವ ಪೊಲೀಸ್ ಠಾಣೆಯಲ್ಲಿ 3–4 ವರ್ಷ ಸೇವೆ ಸಲ್ಲಿಸಿದ್ದರು.

ಮಹಾಗಾಂವ ಕ್ರಾಸ್‌ನ ಮಹಿಳೆಯೊಬ್ಬರೊಂದಿಗೆ ರಾಜಶೇಖರ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ಕುರಿತು ಮಹಿಳೆಯ ಸಂಬಂಧಿಕರು ದೂರು ನೀಡಿದ್ದರಿಂದ ಅವರನ್ನು ಚಿಂಚೋಳಿ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಮಕ್ಕಳ ಶಾಲೆಯ ಕಾರಣ ನೀಡಿ ಅವರು ಮಹಾಗಾಂವ ಕ್ರಾಸ್‌ನಲ್ಲೇ ವಾಸವಾಗಿದ್ದರು ಎನ್ನಲಾಗಿದೆ.

ಸೆ.13ರ ಭಾನುವಾರ ಸಂಜೆ ಮಹಿಳೆಗೆ ‘ನನ್ನ ಜತೆ ಬಾ’ ಎಂದು ಹೇಳಿ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ಬಳಿಕ ಬಂಡೆಗಲ್ಲು ಎತ್ತಿಹಾಕಿ ಮನೆಯ ಬಾಗಿಲು ಮುರಿದು ಒಳನುಗ್ಗಿ ಚಿಂದಿ ಬಟ್ಟೆ ಹಾಗೂ ಪ್ಲಾಸ್ಟಿಕ್‌ ಕಾಗದಗಳಿಗೆ ಬೆಂಕಿ ಹಚ್ಚಿದ್ದಾರೆ. ನಂತರ ಗ್ಯಾಸ್‌ ಸಿಲಿಂಡರ್‌ ಚಾಲು ಮಾಡಿ ಮನೆಗೆ ಬೆಂಕಿ ಹಚ್ಚಲು ಮುಂದಾಗಿದ್ದಾಗ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರ ಎದುರು, ಮಹಿಳೆ ತಮಗೆ ₹10 ಲಕ್ಷ ಹಣ ಹಾಗೂ ಚಿನ್ನ ನೀಡಬೇಕಿದೆ. ಕೇಳಿದಾಗ ಏನೂ ಇಲ್ಲ ಎಂದು ಹೇಳುತ್ತಿದ್ದಾಳೆ ಎಂದು ರಾಜಶೇಖರ ತಿಳಿಸಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮಹಿಳೆ ಮಹಾಗಾಂವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಕುಪಿತಗೊಂಡ ರಾಜಶೇಖರ, ‘ನಾನು ಇಲ್ಲಿಯೇ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ’ ಎಂದು ಪಿಎಸ್‌ಐ ಬಸವರಾಜ ಚಿತ್ತಕೋಟ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಮಾತಿನ ಚಕಮಕಿಯ ಬಳಿಕ ಪಿಎಸ್‌ಐ ಅವರ ಕಾರಿಗೂ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿಗೆ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ