ರಾಜ್ಯದ ಬಹುತೇಕ ಕಡೆ ಮಳೆ ಕೊರತೆ, ತಾಪಮಾನ ಏರಿಕೆ: ಒಣ ಹವೆ ಮುನ್ಸೂಚನೆ

ರಾಜ್ಯದ ಬಹುತೇಕ ಕಡೆ ಮಳೆ ಕೊರತೆ, ತಾಪಮಾನ ಏರಿಕೆ: ಒಣ ಹವೆ ಮುನ್ಸೂಚನೆ

ರಾಜ್ಯದ ಬಹುತೇಕ ಕಡೆ ಮಳೆ ಕೊರತೆ, ತಾಪಮಾನ ಏರಿಕೆ: ಒಣ ಹವೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಸೋಮವಾರದಿಂದ ಮುಂದಿನ ಒಂದು ವಾರ ಒಣಹವೆ ಮುಂದುವರಿಯಲಿದ್ದು, ತಾಪಮಾನ ಏರಿಕೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ಮುಂಗಾರು ಮಳೆ ಕೊರತೆಯಿಂದ, ರಾಜ್ಯದ ಹಲವೆಡೆ ಬರದ ಛಾಯೆ ಆವರಿಸಿದೆ. ಜೂನ್ 1 ರಿಂದ ಈವರೆಗೆ 48.7 ಸೆಂ.ಮೀ. ಮಳೆಯಾಗಿದೆ. 74.2 ಸೆಂ.ಮೀ. ಈ ಅವಧಿಯ ವಾಡಿಕೆ ಮಳೆಯಾಗಿದ್ದು, ಶೇ 34 ರಷ್ಟು ಮಳೆ ಕೊರತೆಯಾಗಿದೆ. ಈ ತಿಂಗಳ ಮೊದಲ ಹನ್ನೊಂದು ದಿನ 1 ಸೆಂ.ಮೀ. ಮಾತ್ರ ಮಳೆಯಾಗಿದೆ. ವಾಡಿಕೆ ಪ್ರಕಾರ 5.1 ಸೆಂ.ಮೀ. ಮಳೆ ಆಗಬೇಕಿತ್ತು. ಶೇ 81ರಷ್ಟು ಮಳೆ ಕೊರತೆಯಾಗಿದೆ.

ಈ ತಿಂಗಳು ಒಣ ಹವೆಯಿಂದ ತಾಪಮಾನದಲ್ಲಿಯೂ ಏರಿಕೆಯಾಗಿದ್ದು, ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದು, ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್‌ವರೆಗೂ ಏರಿಕೆಯಾಗಿದೆ. ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು ಸೇರಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಬೆಂಗಳೂರಿನಲ್ಲಿಯೂ ತಾಪಮಾನ ಏರಿಕೆಯಾಗಿದ್ದು, 33 ಡಿಗ್ರಿ ಸೆಲ್ಸಿಯಸ್‌ಗೆ ಗರಿಷ್ಠ ಉಷ್ಣಾಂಶ ತಲುಪಿದೆ.

ಕರಾವಳಿ ಮತ್ತು ಉತ್ತರ ಒಳನಾಡಿ ನಲ್ಲಿ ಮುಂದಿನ ಒಂದು ವಾರ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೊಡಗು, ರಾಮನಗರ ಜಿಲ್ಲೆಯ ಒಂದೆರಡು ಕಡೆ ಸೋಮವಾರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ