ಮರು ಒತ್ತುವರಿ ತಡೆಗೆ ಪೊಲೀಸ್-ಪಾಲಿಕೆ ಜಂಟಿ ಕಾರ್ಯಪಡೆ ರಚನೆ

ಮರು ಒತ್ತುವರಿ ತಡೆಗೆ ಪೊಲೀಸ್-ಪಾಲಿಕೆ ಜಂಟಿ ಕಾರ್ಯಪಡೆ ರಚನೆ

ಮರು ಒತ್ತುವರಿ ತಡೆಗೆ ಪೊಲೀಸ್-ಪಾಲಿಕೆ ಜಂಟಿ ಕಾರ್ಯಪಡೆ ರಚನೆ

ಬೆಂಗಳೂರು: ‘ನಗರದಾದ್ಯಂತ ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ಮರು ಒತ್ತುವರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರತಿ ನಗರಪಾಲಿಕೆ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳನ್ನು ಒಳಗೊಂಡ ಜಂಟಿ ಕಾರ್ಯಪಡೆ ರಚಿಸಲಾಗುತ್ತದೆ’ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಪಾದಚಾರಿ ಮಾರ್ಗಗಳ ಒತ್ತುವರಿ ಕುರಿತು ಶುಕ್ರವಾರ ನಡೆದ ವರ್ಚುವಲ್ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ‘ಒತ್ತುವರಿ ತೆರವುಗೊಳಿಸಿದ ಬಳಿಕ ಅದೇ ಸ್ಥಳದಲ್ಲಿ ಮರು ಒತ್ತುವರಿ ನಡೆಯುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿದರು.

‘ಒತ್ತುವರಿ ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ಜಂಟಿ ಕಾರ್ಯಪಡೆಯವರು ನಿಯಮಿತ ಹಾಗೂ ಅನಿರೀಕ್ಷಿತ ಪರಿಶೀಲನೆ ನಡೆಸಿ, ಮರು ಒತ್ತುವರಿ ಕಂಡುಬಂದ ಕೂಡಲೇ ಸ್ಥಳದಲ್ಲೇ ಕ್ರಮ ಕೈಗೊಳ್ಳುವ ವ್ಯವಸ್ಥೆ ರೂಪಿಸಬೇಕು. ಮರು ಒತ್ತುವರಿ ಪ್ರಕರಣಗಳನ್ನು ತಕ್ಷಣ ಗುರುತಿಸಿ, ಫೋಟೊ ಹಾಗೂ ಜಿಯೊ-ಟ್ಯಾಗ್ ಮಾಹಿತಿಯೊಂದಿಗೆ ವರದಿ ಮಾಡುವ ವ್ಯವಸ್ಥೆ ಮಾಡಬೇಕು. ಮಾರ್ಷಲ್‌ಗಳು ಹಾಗೂ ಬೀಟ್ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ನಿಯಮಿತವಾಗಿ ಪರಿಶೀಲನೆ ನಡೆಸಬೇಕು. ಒತ್ತುವರಿದಾರರ ಮೇಲೆ ಎಫ್‌ಐಆರ್‌ ದಾಖಲಿಸಬೇಕು’ ಎಂದು ಸೂಚಿಸಿದರು.

ಬೀದಿ ಬದಿ ವ್ಯಾಪಾರಿಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ಹೊಸ ಸಮಗ್ರ ಸಮೀಕ್ಷೆ ನಡೆಸಬೇಕು. ನಂತರ ಅರ್ಹತೆ ಹಾಗೂ ಕಾನೂನುಬದ್ಧ ಮಾನದಂಡಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260905-4-1882013557

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ