ಸಂವಿಧಾನದ ಮೌಲ್ಯ ರಕ್ಷಿಸುವ ಹೊಣೆ ನಾಗರಿಕರದ್ದು: ಶಾಸಕ ಡಿ.ಜಿ.ಶಾಂತನಗೌಡ

ಸಂವಿಧಾನದ ಮೌಲ್ಯ ರಕ್ಷಿಸುವ ಹೊಣೆ ನಾಗರಿಕರದ್ದು: ಶಾಸಕ ಡಿ.ಜಿ.ಶಾಂತನಗೌಡ

ಸಂವಿಧಾನದ ಮೌಲ್ಯ ರಕ್ಷಿಸುವ ಹೊಣೆ ನಾಗರಿಕರದ್ದು: ಶಾಸಕ ಡಿ.ಜಿ.ಶಾಂತನಗೌಡ

ನ್ಯಾಮತಿ: ‘ಪ್ರಜೆಗಳೇ ಪ್ರಭುಗಳು ಎಂಬುದನ್ನು ನೆನಪಿಸುತ್ತ, ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವ ಪ್ರತಿಜ್ಞೆಯೊಂದಿಗೆ ಸರ್ಕಾರದ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮತ್ತು ಯುವ ಸಂಸತ್ತು ಕಾರ್ಯಕ್ರಮವನ್ನು ಸೆ. 15ರಂದು ಆಚರಿಸಲಾಗುತ್ತಿದೆ’ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಹಶೀಲ್ದಾರ್ ವಿಶ್ವನಾಥ ಮುರುಡಿ, ವಕೀಲರ ಸಂಘದ ಅಧ್ಯಕ್ಷ ಎಂ.ಗುಡ್ಡಪ್ಪ, ನಿಕಟಪೂರ್ವ ಅಧ್ಯಕ್ಷ ಬಿ. ಉಮೇಶ್‌, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಶಿವರಾಮನಾಯ್ಕ ಹಾಗೂ ವಿವಿಧ ಶಾಲೆ– ಕಾಲೇಜುಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಎಚ್.ಎಲ್.ಉಮಾ ಮತ್ತು ತಾಲ್ಲೂಕಿನ ವಿವಿಧ ವಸತಿ ನಿಲಯಗಳ ಮೇಲ್ವಿಚಾರಕರು ಕಾರ್ಯಕ್ರಮ ಆಯೋಜಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ