ಕರ್ತವ್ಯಲೋಪ ಆರೋಪ: ಶಿರ್ಲಾಲು ಪಿಡಿಒ ಸುಶೀಲಾ ಅಮಾನತು

ಕರ್ತವ್ಯಲೋಪ ಆರೋಪ: ಶಿರ್ಲಾಲು ಪಿಡಿಒ ಸುಶೀಲಾ   ಅಮಾನತು

ಕರ್ತವ್ಯಲೋಪ ಆರೋಪ: ಶಿರ್ಲಾಲು ಪಿಡಿಒ ಸುಶೀಲಾ ಅಮಾನತು

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಶಿರ್ಲಾಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಶೀಲಾ ಅವರನ್ನು ಮಂಗಳವಾರ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.

ಪಶ್ಚಿಮಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಘೋಷಣೆ ಸಂಬಂಧ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಕರಡು ಅಧಿಸೂಚನೆ ಪರಿಣಾಮಗಳ ಕುರಿತು ಶಿರ್ಲಾಲು ಗ್ರಾಮ ಪಂಚಾಯಿತಿ ಸಭೆಯನ್ನು ಸೆ.25ರಂದು ನಡೆಸಲು ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿಯಿಂದ ನಿಗದಿಗೊಳಿಸಲಾಗಿತ್ತು. ಆದರೆ ಸೆ.21ರಂದು ಗ್ರಾಮಸಭೆ ಮರು ನಿಗದಿಪಡಿಸಿದ ಪಿಡಿಒ ಸುಶೀಲಾ, ಸಭೆಗೂ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾಗಿತ್ತು. ಪಿಡಿಒ ಈ ಹಿಂದೆಯೂ ಹಲವು ಬಾರಿ ಕರ್ತವ್ಯಲೋಪ, ನಿರ್ಲಕ್ಷ ವಹಿಸಿದ್ದು ಸುಶೀಲಾ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ತಾಲ್ಲೂಕು ಪಂಚಾಯಿತಿ ಇಒ ಕೋರಿಕೆಯಂತೆ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಸುಶೀಲಾ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಆದೇಶದಲ್ಲಿ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ