ವಿಶ್ವಕರ್ಮರ ಕೊಡುಗೆ ಅನನ್ಯ: ಶಾಸಕ ಅಲ್ಲಮಪ್ರಭು ಪಾಟೀಲ

ವಿಶ್ವಕರ್ಮರ ಕೊಡುಗೆ ಅನನ್ಯ: ಶಾಸಕ ಅಲ್ಲಮಪ್ರಭು ಪಾಟೀಲ

ವಿಶ್ವಕರ್ಮರ ಕೊಡುಗೆ ಅನನ್ಯ: ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ‘ಹಂಪಿ, ಪಟ್ಟದಕಲ್ಲು, ಐಹೊಳೆ ಸೇರಿದಂತೆ ಕರ್ನಾಟಕದ ಐತಿಹಾಸಿಕ ಸ್ಮಾರಕಗಳ ಸೌಂದರ್ಯಕ್ಕೆ ವಿಶ್ವಕರ್ಮ ಸಮುದಾಯದ ಕಲಾತ್ಮಕ ಕೊಡುಗೆಯೇ ಕಾರಣ’ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.

ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಗುರುವಾರ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ವಿಶಿಷ್ಟ ವಾಸ್ತುಶಿಲ್ಪ ಮತ್ತು ಕಲಾತ್ಮಕ ಮೂರ್ತಿಗಳನ್ನು ಕೆತ್ತಿ ಜೀವತುಂಬುವ ಮೂಲಕ ಜಗತ್ತಿಗೆ ಭಾರತೀಯ ಸಂಸ್ಕೃತಿ ಮತ್ತು ಸೌಂದರ್ಯದ ಪರಿಚಯ ಮಾಡಿಕೊಟ್ಟ ಕೀರ್ತಿ ವಿಶ್ವಕರ್ಮರಿಗೆ ಸಲ್ಲುತ್ತದೆ’ ಎಂದರು.

ವಿಶ್ವಕರ್ಮ ಸಮುದಾಯದ ಕಟ್ಟಡ ನಿರ್ಮಾಣಕ್ಕೆ ‌‌ಶಾಸಕರ ಅನುದಾನದಲ್ಲಿ ₹25 ಲಕ್ಷ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಗ್ರಾಮೀಣ ಶಾಸಕ‌ ಬಸವರಾಜ‌ ಮತ್ತಿಮುಡು ಮಾತನಾಡಿದರು.

ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ (ಸ್ವಾಯತ್ತ) ಸಹಾಯಕ ಪ್ರಾಧ್ಯಾಪಕ ಲಕ್ಷ್ಮಿಕಾಂತ ಪಂಚಾಳ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಶಿ ಸ್ವಾಗತಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಹಾಯಕ ಶಿವಪ್ರಭು ಹಿರೇಮಠ, ಕಲಬುರಗಿ ವಿಶ್ವಕರ್ಮ ಏಕದಂಡಿ ಮಠದ ಸುರೇಂದ್ರ ಸ್ವಾಮೀಜಿ, ಕವಬುರಗಿ ವಿಶ್ವಕರ್ಮ ಮೂರುಜಾವದೀಶ್ವರ ಮಠದ ಪ್ರಣವ ನಿರಂಜನ ಸ್ವಾಮೀಜಿ, ಮುಖಂಡ ಸುಭಾಷ ಪಂಚಾಳ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು. ಇದಕ್ಕೂ ಮುನ್ನಕಲಾವಿದರಿಂದ ಭರತನಾಟ್ಯ ಪ್ರದರ್ಶನ ನಡೆಯಿತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ