ಜಾಲಹಳ್ಳಿ: ಪಶು ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ರೈತರಿಂದ ಪ್ರತಿಭಟನೆ

ಜಾಲಹಳ್ಳಿ: ಪಶು ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ರೈತರಿಂದ ಪ್ರತಿಭಟನೆ

ಜಾಲಹಳ್ಳಿ: ಪಶು ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ರೈತರಿಂದ ಪ್ರತಿಭಟನೆ

ಜಾಲಹಳ್ಳಿ: ‘ಪಟ್ಟಣದಲ್ಲಿರುವ ಪಶು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ನಿಗದಿತ ಸಮಯಕ್ಕೆ ಆಸ್ಪತ್ರೆಗೆ ಹಾಜರಾಗದೇ ಇರುವುದರಿಂದ ಜಾನುವಾರು ಸಾಕಾಣಿಕೆದಾರರಿಗೆ ಹಾಗೂ ರೈತರಿಗೆ ತುಂಬ ತೊಂದರೆ ಉಂಟಾಗಿದೆ’ ಎಂದು ಆರೋಪಿಸಿ ಮಂಗಳವಾರ ಆಸ್ಪತ್ರೆಯ ಅವರಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಂಘದ ಅಧ್ಯಕ್ಷ ಹನುಮಂತ ಮಡಿವಾಳ ಮಾತನಾಡಿ, ‘ಹೆಸರಿಗೆ ಮಾತ್ರವೇ ಪಶು ಆಸ್ಪತ್ರೆ ಇದ್ದು, ಯಾವುದೇ ವೈದ್ಯರು ಇರುವುದಿಲ್ಲ’ ಎಂದು ದೂರಿದರು.

ಜಾಲಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಾವರಿ ಇರುವುರಿಂದ ಬಹುತೇಕ ರೈತರು ಹೈನುಗಾರಿಕೆ ಮಾಡುತ್ತಿದ್ದು, ಅವರ ಜಾನುವಾರಿಗೆ ಆರೋಗ್ಯ ಸಮಸ್ಯೆ ಆದರೆ, ಸರಿಯಾಗಿ ತಪಾಸಣೆ, ಚಿಕಿತ್ಸೆ ನೀಡಲು ವೈದ್ಯರು ಆಸ್ಪತ್ರೆಗೆ ಬರುವುದಿಲ್ಲ. ಅಲ್ಲದೇ ವಿವಿಧ ಯೋಜನೆಯಡಿ ಕಚೇರಿಯಲ್ಲಿ ಮಾಹಿತಿ ನೀಡಲು ಕೆಲಸಕ್ಕೆ ತೆಗೆದುಕೊಂಡ ಸಿಬ್ಬಂದಿ ಚಿಕಿತ್ಸೆ ನೀಡುತ್ತಾರೆ. ಅಲ್ಲದೇ ಖಾಸಗಿ ವ್ಯಕ್ತಿಗಳು ತಾವು ಪಶು ವೈದ್ಯರು ಎನ್ನುವಂತೆ ಜಾನುವಾರುಗಳಿಗೆ ಚಿಕಿತ್ಸೆ ನೀಡುತ್ತಾರೆ. ಅಂತಹವರನ್ನು ಗುರುತಿಸಿ‌ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಭೇಟಿ: ತಾಲ್ಲೂಕು ಪಶು ವೈದ್ಯಾಧಿಕಾರಿ ಮುತ್ತುರಾಜ ಅವರು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ, ‘ಆಸ್ಪತ್ರೆ ಯಲ್ಲಿನ ಸಮಸ್ಯೆ ಬಗ್ಗೆ ತಿಳಿದುಕೊಳ್ಳಲಾಗಿದೆ. ತಕ್ಷಣವೇ ಮೇಲಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು’ ಎಂದು ಲಿಖಿತ ಭರವಸೆ‌ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ರಂಗನಾಥ ನಾಯಕ ಬುಂಕಲದೊಡ್ಡಿ, ರಮೇಶ ತೆಗ್ಗೆಳ್ಳಿ, ನಿಂಗಣ್ಣ ಮಕಾಶಿ, ದುರುಗಪ್ಪ ಹೊರಾಟ್ಟಿ, ಬಸವರಾಜ ವಂದ್ಲಿ, ಸುರೇಶಗೌಡ, ನರಸಣ್ಣ ಧರೆಪೂರ, ಚಂದ್ರಶೇಖರ, ಶಿವಪ್ಪ ಚಿಂಚರಕಿ, ಬಸವರಾಜ ಲಿಂಗದಹಳ್ಳಿ, ಮುದ್ದಪ್ಪ ಬಂಡಿ, ಶರಣಪ್ಪ ಕಾರಲಕುಂಟಿ, ನರೇಶ್ ಕುರುಕುಂದಿ ಮತ್ತಿತರರು ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ