ಸೃಷ್ಟಿಯ ಮೂಲ ಜಗದ್ಗುರು ವಿಶ್ವಕರ್ಮ; ಶಾಸಕ ಎಸ್.ಎನ್.ನಾರಾಯಣಸ್ವಾಮಿ

ಸೃಷ್ಟಿಯ ಮೂಲ ಜಗದ್ಗುರು ವಿಶ್ವಕರ್ಮ; ಶಾಸಕ ಎಸ್.ಎನ್.ನಾರಾಯಣಸ್ವಾಮಿ

ಸೃಷ್ಟಿಯ ಮೂಲ ಜಗದ್ಗುರು ವಿಶ್ವಕರ್ಮ; ಶಾಸಕ ಎಸ್.ಎನ್.ನಾರಾಯಣಸ್ವಾಮಿ

ಬಂಗಾರಪೇಟೆ: ಈ ಪ್ರಪಂಚದ ಸೃಷ್ಟಿಯ ಮೂಲ ಜಗದ್ಗುರು ವಿಶ್ವಕರ್ಮ. ಕಲೆ, ವಾಸ್ತುಶಿಲ್ಪ ಹಾಗೂ ತಂತ್ರಜ್ಞಾನ ಕ್ಷೇತ್ರಗಳಿಗೆ ಅಡಿಪಾಯ ಹಾಕಿಕೊಟ್ಟ ವಿಶ್ವಕರ್ಮ ಅವರ ತತ್ವಾದರ್ಶಗಳು ಸಾರ್ವಕಾಲಿಕ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ತಾಲ್ಲೂಕು ಆಡಳಿತ ಕಚೇರಿಯಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗುರುವಾರ ನಡೆದ ವಿಶ್ವಕರ್ಮ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸುವ ಮೂಲಕ ಗೌರವಿಸಲಾಯಿತು.

ಬಳಿಕ ಮಾತನಾಡಿದ ಅವರು, ‘ಮಾನವ ಸಂಸ್ಕೃತಿ ಮತ್ತು ನಾಗರಿಕತೆಯ ವಿಕಾಸದ ಹಾದಿಯಲ್ಲಿ ವಿಶ್ವಕರ್ಮ ಸಮುದಾಯದ ಪಾತ್ರ ಮಹತ್ವದ್ದು. ದೇವಾಲಯ ನಿರ್ಮಾಣ, ಶಿಲ್ಪಕಲೆ, ಕೃಷಿಗೆ ಅಗತ್ಯ ಉಪಕರಣ ಹಾಗೂ ದೈನಂದಿನ ಜೀವನೋಪಾಯಕ್ಕೆ ಬೇಕಾದ ಅಗತ್ಯ ಕಾಯಕ ಕೌಶಲವನ್ನು ಭೂಮಿಗೆ ಪರಿಚಯಿಸಿದ ಶ್ರೇಯಸ್ಸು ಈ ವಂಶಸ್ಥರಿಗೆ ಸಲ್ಲುತ್ತದೆ. ಕಾಯಕವೇ ಕೈಲಾಸ ಎಂಬ ತತ್ವದಡಿ ಶ್ರಮ ಸಂಸ್ಕೃತಿಯನ್ನು ಎತ್ತಿಹಿಡಿದಿರುವ ಈ ಸಮುದಾಯದ ಕೊಡುಗೆಯನ್ನು ಗೌರವಿಸಬೇಕಿದೆ’ ಎಂದರು.

ಬದಲಾಗುತ್ತಿರುವ ತಂತ್ರಜ್ಞಾನದ ಯುಗದಲ್ಲೂ ಸಮುದಾಯದ ಕೌಶಲ ನಶಿಸದಂತೆ, ಕೇವಲ ಕುಲಕಸಬಿಗೆ ಸೀಮಿತವಾಗದೆ ಯುವಜನತೆ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ವಿಶ್ವಕರ್ಮ ಅಭಿವೃದ್ಧಿ ನಿಗಮದ ಯೋಜನೆಗಳನ್ನು ಸಮುದಾಯದವರು ಬಳಸಿಕೊಳ್ಳಿ ಎಂದು ಕರೆ ನೀಡಿದರು.

ತಹಶೀಲ್ದಾರ್ ಕೆ.ಎನ್.ಸುಜಾತ, ನಾಗರಾಜಾಚಾರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್, ಗೋವಿಂದ, ಎಸ್.ವೆಂಕಟೇಶ್, ಶಶಿಕುಮಾರ್, ಜಯರಾಮಾಚಾರಿ, ರವಿಶಂಕರಾಚಾರಿ, ಜಿ.ವಿ.ಆಚಾರಿ, ರವಿ, ಬುದ್ದಾಚಾರಿ, ಶ್ರೀನಿವಾಸ್ ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ