ಕಲಬುರಗಿ| ಗಂಭೀರ ಪ್ರಶ್ನೆಗಳಿಗೆ ಉತ್ತರಿಸದ ಚುನಾವಣಾ ಆಯೋಗ: ಕೆ.ನೀಲಾ

ಕಲಬುರಗಿ| ಗಂಭೀರ ಪ್ರಶ್ನೆಗಳಿಗೆ ಉತ್ತರಿಸದ ಚುನಾವಣಾ ಆಯೋಗ: ಕೆ.ನೀಲಾ

ಕಲಬುರಗಿ| ಗಂಭೀರ ಪ್ರಶ್ನೆಗಳಿಗೆ ಉತ್ತರಿಸದ ಚುನಾವಣಾ ಆಯೋಗ: ಕೆ.ನೀಲಾ

ಕಲಬುರಗಿ: ‘ಸೆ.26ರಂದು ಭಾರತ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಹೇಳಿಕೆ, ಆಯೋಗದ ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಬಹಿರಂಗಗೊಂಡಿರುವ ವಿಷಯಗಳಿಂದ ಉದ್ಭವಿಸಿದ ಗಂಭೀರ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ’ ಎಂದು ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಟೀಕಿಸಿದ್ದಾರೆ.

‘ವಿರೋಧ ಪಕ್ಷಗಳು ಮತ್ತು ನಾಗರಿಕ ಸಮಾಜ ಸಂಘಟನೆಗಳು ವ್ಯಕ್ತಪಡಿಸಿದ ಕಳವಳ ದೇಶದಾದ್ಯಂತ ಹೇರಲಾದ ಎಸ್‌ಐಆರ್ ಪ್ರಕ್ರಿಯೆಯ ನಿರ್ದಿಷ್ಟ ಸನ್ನಿವೇಶದಲ್ಲಿ ಉದ್ಭವಿಸಿದ್ದಾಗಿದೆ. ಆಯೋಗದೊಳಗಿನಿಂದಲೇ ಹೊರಬಂದ ಮಾಹಿತಿ ಈ ಕಳವಳವನ್ನು ಮತ್ತಷ್ಟು ಬಲಪಡಿಸಿದೆ. ಚುನಾವಣಾ ಪ್ರಕ್ರಿಯೆಯು ಪಾರದರ್ಶಕ, ಕಾನೂನಿಗೆ ಅನುಗುಣವಾಗಿ ಮತ್ತು ಅರ್ಹ ಮತದಾರರನ್ನು ತಪ್ಪಾಗಿ ಕೈಬಿಡುವುದನ್ನು ತಡೆಯುವ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ನಡೆಯುತ್ತಿದೆಯೇ ಎಂಬುದು ಮೂಲ ಪ್ರಶ್ನೆಯಾಗಿದೆ’ ಎಂದಿದ್ದಾರೆ.

‘ಚುನಾವಣಾ ಆಯೋಗದ ಹೇಳಿಕೆಯು ಈ ಪ್ರಮುಖ ಪ್ರಶ್ನೆಗಳನ್ನು ಎತ್ತಿಕೊಳ್ಳುವುದಿಲ್ಲ ಅಥವಾ ನಿರಾಕರಿಸುವುದಿಲ್ಲ. ಆಳುವ ವ್ಯವಸ್ಥೆಯ ಆಣತಿಯ ಮೇರೆಗೆ ಕಾರ್ಯನಿರ್ವಹಿಸುವ ಒಬ್ಬ ವ್ಯಕ್ತಿ ಅಥವಾ ಗುಂಪಿನ ವಿವೇಚನಾಶೂನ್ಯ ಮತ್ತು ಸರ್ವಾಧಿಕಾರಿ ಕ್ರಮಗಳಿಂದಾಗಿ ನಾಗರಿಕರು ಅನುಭವಿಸಿದ ತೀವ್ರ ತೊಂದರೆಗಳಿಗೆ ಹೊಣೆಗಾರಿಕೆಯ ಬಗ್ಗೆಯೂ ಅದು ಏನನ್ನೂ ಹೇಳುವುದಿಲ್ಲ’ ಎಂದು ಹೇಳಿದ್ದಾರೆ.

‘ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದರೆ, ದುರ್ನಡತೆಗಾಗಿ ಅವರ ಮೇಲೆ ಮಹಾಭಿಯೋಗ ಪ್ರಕ್ರಿಯೆ ಕೈಗೊಳ್ಳಬೇಕು. ಎಸ್‌ಐಆರ್ ಪ್ರಕ್ರಿಯೆ ತಕ್ಷಣ ನಿಲ್ಲಿಸಬೇಕು’ ಎಂದಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ