ಮೋದಿ ಆಯೋಜಿಸಿದ್ದ ಔತಣಕೂಟಕ್ಕೆ ಚೀನಾ ಅಧ್ಯಕ್ಷ ಷಿ, ಅಬುಧಾಬಿ ಯುವರಾಜ ಖಾಲಿದ್ ಗೈರು

ಮೋದಿ ಆಯೋಜಿಸಿದ್ದ ಔತಣಕೂಟಕ್ಕೆ ಚೀನಾ ಅಧ್ಯಕ್ಷ ಷಿ, ಅಬುಧಾಬಿ ಯುವರಾಜ ಖಾಲಿದ್ ಗೈರು

ಮೋದಿ ಆಯೋಜಿಸಿದ್ದ ಔತಣಕೂಟಕ್ಕೆ ಚೀನಾ ಅಧ್ಯಕ್ಷ ಷಿ, ಅಬುಧಾಬಿ ಯುವರಾಜ ಖಾಲಿದ್ ಗೈರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಆಯೋಜಿಸಿದ್ದ ಔತಣಕೂಟಕ್ಕೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಗೈರಾಗಿದ್ದರು ಎಂದು ಈ ಬಗ್ಗೆ ಗೊತ್ತಿರುವ ಮೂಲದಿಂದ ತಿಳಿದುಬಂದಿದೆ.

ಬ್ರಿಕ್ಸ್‌ ರಾಷ್ಟ್ರಗಳ ನಾಯಕರು, ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಇತರ ದೇಶಗಳ ನಾಯಕರು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳಿಗಾಗಿ ಈ ಔತಣಕೂಟ ಆಯೋಜಿಸಲಾಗಿತ್ತು.

ಅಬುಧಾಬಿಯ ಯುವರಾಜ ಶೇಖ್‌ ಖಾಲಿದ್‌ ಬಿನ್‌ ಮೊಹಮ್ಮದ್‌ ಅವರು ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಿ ವಾಪಸ್ ತವರಿಗೆ ಮರಳಿದ್ದು, ಅವರೂ ಔತಣಕೂಟಕ್ಕೆ ಗೈರಾಗಿದ್ದರು.

ಚೀನಾ ಅಧ್ಯಕ್ಷರ ಗೈರಿಗೆ ಕಾರಣ ಏನೂ ಎನ್ನುವುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಆದರೆ, ವಿಶ್ರಾಂತಿ ಪಡೆಯಲು ಷಿ ಅವರು ಹೋಟೆಲ್‌ಗೆ ತೆರಳಿದ್ದರು ಎಂದು ಮೂಲವೊಂದು ತಿಳಿಸಿದೆ.

ಚೀನಾ ಅಧ್ಯಕ್ಷರು ಶನಿವಾರ ಮಧ್ಯಾಹ್ನ ದೆಹಲಿಗೆ ಆಗಮಿಸಿದ್ದರು. ಅವರು ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಿ, ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಿದ್ದರು.

ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಸೇರಿದಂತೆ ಬ್ರಿಕ್ಸ್‌ನ ಇತರ ನಾಯಕರು ಔತಣಕೂಟದಲ್ಲಿ ಭಾಗವಹಿಸಿದ್ದರು.

ಕೇಂದ್ರ ಸಚಿವರಾದ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌, ಪಿಯೂಷ್‌ ಗೋಯಲ್‌, ಅಶ್ವಿನಿ ವೈಷ್ಣವ್‌ ಮತ್ತು ಶಿವರಾಜ್‌ ಸಿಂಗ್‌ ಚೌಹಾಣ್‌ ಔತಣಕೂಟದಲ್ಲಿ ಭಾಗಿಯಾಗಿದ್ದರು.

ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸೇರಿದಂತೆ ಹಲವು ಮುಖ್ಯಮಂತ್ರಿಗಳೂ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ