ಲೋಕಾಯುಕ್ತ ದಾಳಿ: ಜೆಸ್ಕಾಂ ಎಇಇ ರಾಜೇಶ್ವರಿ ಮನೆಯಲ್ಲಿ ಅಪಾರ ಚಿನ್ನಾಭರಣ ಪತ್ತೆ

ಲೋಕಾಯುಕ್ತ ದಾಳಿ: ಜೆಸ್ಕಾಂ ಎಇಇ ರಾಜೇಶ್ವರಿ ಮನೆಯಲ್ಲಿ ಅಪಾರ ಚಿನ್ನಾಭರಣ ಪತ್ತೆ

ಲೋಕಾಯುಕ್ತ ದಾಳಿ: ಜೆಸ್ಕಾಂ ಎಇಇ ರಾಜೇಶ್ವರಿ ಮನೆಯಲ್ಲಿ ಅಪಾರ ಚಿನ್ನಾಭರಣ ಪತ್ತೆ

ಕಲಬುರಗಿ: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಬೆಳಿಗ್ಗೆ ಇಲ್ಲಿನ ಜೆಸ್ಕಾಂ ಎಇಇ ರಾಜೇಶ್ವರಿ ಬಬಲಾದ ‌ಅವರ ಮನೆಗಳು ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ನಗರದ‌ ಮಹಾಲಕ್ಷ್ಮಿ ಬಡಾವಣೆಯ ಮನೆ, ಖಾದ್ರಿ ಚೌಕನಲ್ಲಿರುವ ನಿವಾಸ ಹಾಗೂ ಸೂಪರ್ ಮಾರ್ಕೆಟ್‌ನಲ್ಲಿರುವ ಜೆಸ್ಕಾಂ‌ನ ಅವರ ಕಚೇರಿಯ ಮೇಲೆ ದಾಳಿ ನಡೆದಿದೆ. ಬೆಳಿಗ್ಗೆ ವಾಕಿಂಗ್ ಹೋಗಿದ್ದ ರಾಜೇಶ್ವರಿ ಅವರು ಮನೆಗೆ ಬರುವುದರೊಳಗೆ ಈ ದಾಳಿ ನಡೆದಿದೆ.

ಲೋಕಾಯುಕ್ತ ಎಸ್ಪಿ ಸಿ.ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬಸವರಾಜ ಎಲಿಗಾರ, ಇನ್‌ಸ್ಪೆಕ್ಟರ್‌ ಅರುಣಕುಮಾರ ಮುರಗುಂಡಿ ಹಾಗೂ ಯಾದಗಿರಿ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಮೂರು ತಂಡಗಳಲ್ಲಿ 40 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಳೆದ ನಾಲ್ಕು ತಾಸುಗಳಿಂದ ದಾಖಲೆಗಳ ಪತ್ತೆ, ಪರಿಶೀಲನೆಯಲ್ಲಿ ತೊಡಗಿದ್ದಾರೆ. 

ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಮನೆಯಲ್ಲಿ ಚಿನ್ನದ ಸರಗಳು, ನಕ್ಲೆಸ್‌ಗಳು, ಉಂಗುರುಗಳು ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ಹೇಳಿವೆ.

ರಾಜೇಶ್ವರಿ ಅವರು 18 ವರ್ಷಗಳ ಹಿಂದೆ ಸರ್ಕಾರಿ ಹುದ್ದೆಗೆ ಸೇರಿದ್ದರು ಎಂದು ಮೂಲಗಳು ತಿಳಿಸಿವೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ