ದಾವಣಗೆರೆ: ಕಾನೂನು ವಿದ್ಯಾರ್ಥಿ ರಾಕೇಶ್ ರಸ್ತೆ ಅಪಘಾತದಲ್ಲಿ ಸಾವು

ದಾವಣಗೆರೆ: ಕಾನೂನು ವಿದ್ಯಾರ್ಥಿ ರಾಕೇಶ್ ರಸ್ತೆ ಅಪಘಾತದಲ್ಲಿ ಸಾವು

ದಾವಣಗೆರೆ: ಕಾನೂನು ವಿದ್ಯಾರ್ಥಿ ರಾಕೇಶ್ ರಸ್ತೆ ಅಪಘಾತದಲ್ಲಿ ಸಾವು

ಹರಿಹರ: ನಗರದ ಹೈಸ್ಕೂಲ್ ಬಡಾವಣೆಯ ನಿವಾಸಿ ಸಿ.ಎಚ್.ರಾಕೇಶ್ (ಮುತ್ತು) (22) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ದಾವಣಗೆರೆಯ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್ ಸೆ. 4ರಂದು ಬೆಂಗಳೂರಿನಿಂದ ಬೈಕ್‌ನಲ್ಲಿ ಬರುವಾಗ ನಡೆದ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ.

ರಾಕೇಶ್‌ ಅವರು ನಗರಸಭೆ ಮಾಜಿ ಅಧ್ಯಕ್ಷೆ ರಾಧಾ ಸಿ.ಎನ್. ಹುಲಗೇಶ್ ಮತ್ತು ಹಾಲುಮತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಎನ್. ಹುಲಗೇಶ್ ದಂಪತಿ ಪುತ್ರ.

ಶನಿವಾರ ಮಧ್ಯಾಹ್ನ 2ಕ್ಕೆ ನಗರದ ಹಿಂದೂ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ