ಕೋಲಾರ|ಮಳೆ ಹಾನಿ ಅರ್ಜಿ ಸಲ್ಲಿಸಿದರೆ ಪರಿಹಾರ: ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್‌

ಕೋಲಾರ|ಮಳೆ ಹಾನಿ ಅರ್ಜಿ ಸಲ್ಲಿಸಿದರೆ ಪರಿಹಾರ: ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್‌

ಕೋಲಾರ|ಮಳೆ ಹಾನಿ ಅರ್ಜಿ ಸಲ್ಲಿಸಿದರೆ ಪರಿಹಾರ: ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್‌

ಕೋಲಾರ: ಜಿಲ್ಲೆಯ ಕೆಲವೆಡೆ ಭಾರಿ ಮಳೆಯಿಂದ ಜೋಳ, ರಾಗಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದೆ ಎಂಬ ದೂರುಗಳು ಬರುತ್ತಿವೆ. ಹಾನಿಗೊಳಗಾದ ರೈತರು ಸೂಕ್ತ ದಾಖಲೆಗಳ ಸಮೇತ, ಹಾನಿಯಾದ ಬೆಳೆಗಳ ಮಾಹಿತಿ ನೀಡಿದರೆ, ಅರ್ಜಿ ಸಲ್ಲಿಸಿದರೆ ಜಿಲ್ಲಾಡಳಿತ ನೆರವಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್‌ ಹೇಳಿದರು.

ನಗರದಲ್ಲಿ ಶುಕ್ರವಾರ ಕೋಲಾರ –ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಹಾಗೂ ಆರೆಂಜ್ ಆರ್ಮಿ ಟ್ರಸ್ಟ್‌ ಹಮ್ಮಿಕೊಂಡಿದ್ದ ಹೆಲ್ಮೆಟ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬರಗಾಲ ಕಾರಣ ರೈತರಿಂದ ಬ್ಯಾಂಕುಗಳು ಒಂದು ವರ್ಷದವರೆಗೆ ಸಾಲ ಮರುಪಾವತಿ ಮಾಡಿಸಿಕೊಳ್ಳಬಾರದೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಈ ಆದೇಶವನ್ನು ಎಲ್ಲಾ ಬ್ಯಾಂಕ್‌ಗಳು ಪಾಲಿಸಬೇಕು. ನಾನು ಕೂಡ ಜಿಲ್ಲೆಯ ಲೀಡ್ ಬ್ಯಾಂಕ್ ಮ್ಯಾನೇಜರ್ ಮತ್ತು ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಅಥವಾ ಇನ್ನಿತರ ಬ್ಯಾಂಕ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದರು.

ಜಿಲ್ಲೆಯಲ್ಲಿ ಈ ಬಾರಿ ರಾಗಿ ಮತ್ತು ಶೇಂಗಾ ಬೆಳೆಗಳಿಗೆ ವಿಮೆ ಮಾಡಿಸಿದವರಿಗೆ ವಿಮಾ ಕಂಪನಿಯಿಂದ ₹ 28 ಕೋಟಿ ಬಂದಿದೆ. ಅದನ್ನು ರೈತರಿಗೆ ತಲುಪಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್, ಉಪಾಧ್ಯಕ್ಷ ಅಬ್ಬಣಿ ಶಂಕರ್, ನಿರ್ದೇಶಕ ಸಿ.ವಿ.ನಾಗರಾಜ್‌, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಜಿ.ಸುರೇಶ್ ಕುಮಾರ್, ಖಜಾಂಚಿ ರಾಜೇಂದ್ರ ಸಿಂಹ, ಉಪಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಶಮ್ಗರ್, ಆರೆಂಜ್ ಆರ್ಮಿ ಟ್ರಸ್ಟ್ ಅಧ್ಯಕ್ಷ ಹರೀಶ್ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ