
ಕೊಡಗು ವಿ.ವಿ.ಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡಲು ಆಗ್ರಹ
ಮಡಿಕೇರಿ: ಕೊಡಗು ವಿಶ್ವವಿದ್ಯಾಲಯಕ್ಕೆ ಭಾರತದ ಮೊದಲ ಮಹಾದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರನ್ನೇ ನಾಮಕರಣ ಮಾಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯ ರಡ್ಡಿ ಅವರಿಗೆ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮನವಿ ಸಲ್ಲಿಸಿದ್ದಾರೆ.
ಎಲ್ಲ ಕಾಲಕ್ಕೂ ಅತ್ಯಂತ ಅರ್ಹ, ಯೋಗ್ಯ ಹಾಗೂ ಸ್ಫೂರ್ತಿದಾಯಕ ಹೆಸರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರದ್ದಾಗಿದೆ. ದೇಶಕ್ಕೆ ನೀಡಿದ ಸೇವೆಗಾಗಿ ಅವರ ಹೆಸರನ್ನು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡುವುದು ಸೂಕ್ತ ಗೌರವವಾಗಲಿದೆ ಎಂದು ಹೇಳಿದ್ದಾರೆ ಎಂದು ಎನ್.ಯು.ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.