ಮೆಟ್ಟೂರು ಜಲಾಶಯದಿಂದ ಕೃಷಿಗೆ ನೀರು ಹರಿಸಿದ ತಮಿಳುನಾಡು ಸಿಎಂ ವಿಜಯ್‌

ಮೆಟ್ಟೂರು ಜಲಾಶಯದಿಂದ ಕೃಷಿಗೆ ನೀರು ಹರಿಸಿದ ತಮಿಳುನಾಡು ಸಿಎಂ ವಿಜಯ್‌

ಮೆಟ್ಟೂರು ಜಲಾಶಯದಿಂದ ಕೃಷಿಗೆ ನೀರು ಹರಿಸಿದ ತಮಿಳುನಾಡು ಸಿಎಂ ವಿಜಯ್‌

ಮೇಟೂರು: ಮೆಟ್ಟೂರು ಸ್ಟ್ಯಾನ್ಲಿ ಜಲಾಶಯದ ಗೇಟ್ ತೆರೆಯುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್‌ ವಿಜಯ್ ಅವರು ಕಾವೇರಿ ಜಲಾನಯನ ಪ್ರದೇಶಗಳಿಗೆ ನೀರು ಬಿಡುಗಡೆ ಮಾಡಿದ್ದಾರೆ.

ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ಅಣೆಕಟ್ಟಿನ ಗೇಟ್‌ಗಳನ್ನು ತೆರೆದ ವಿಜಯ್, ಜಲಾಶಯದಿಂದ ರಭಸವಾಗಿ ಹರಿಯುತ್ತಿದ್ದ ನೀರಿಗೆ ಬಾಗಿನ ಅರ್ಪಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶಗಳ ರೈತರಿಗೆ ಜೀವನಾಡಿಯಾಗಿರುವ ಈ ಅಣೆಕಟ್ಟಿನಿಂದ ನೀರು ಬಿಡುಗಡೆಗೊಳ್ಳುವುದರಿಂದ ಲಕ್ಷಾಂತರ ಎಕರೆ ಕೃಷಿ ಭೂಮಿಗೆ ಪ್ರಯೋಜನವಾಗಲಿದೆ.

ಅಣೆಕಟ್ಟಿನ ಆವರಣದಲ್ಲಿ ರೈತರೊಂದಿಗೆ ಸಂವಾದ ನಡೆಸಿದ ವಿಜಯ್, ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ನೀರಾವರಿಗೆ ಸಂಬಂಧಿಸಿದ ವಿಚಾರಗಳ ಕುರಿತು ಮಾಹಿತಿ ಪಡೆದರು.

120 ಅಡಿ ಗರಿಷ್ಠ ಸಾಮರ್ಥ್ಯದ ಮೆಟ್ಟೂರು ಅಣೆಕಟ್ಟಿನಲ್ಲಿ ಸೆಪ್ಟೆಂಬರ್ 1ರ ವೇಳೆಗೆ 91.56 ಅಡಿ ನೀರು ಸಂಗ್ರಹವಾಗಿದೆ.

ಸಾಮಾನ್ಯವಾಗಿ ಪ್ರತಿ ವರ್ಷ ಜೂನ್ 12ರಂದು ಕಾವೇರಿ ಜಲಾನಯನ ಪ್ರದೇಶಗಳಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. ಈ ಬಾರಿ ಮುಂಗಾರು ಮಳೆ ಕೊರತೆ ಮತ್ತು ಜಲಾಶಯದಲ್ಲಿ ಸಮರ್ಪಕ ನೀರು ಸಂಗ್ರಹವಾಗದ ಕಾರಣ ನೀರು ಬಿಡುಗಡೆ ಪ್ರಕ್ರಿಯೆ ವಿಳಂಬವಾಗಿತ್ತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ