ಉದ್ಯಾನ ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲರು, ಸರ್ಕಾರಕ್ಕೆ ಮರುಸಲ್ಲಿಸಲು ಸೂಚನೆ

ಉದ್ಯಾನ ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲರು, ಸರ್ಕಾರಕ್ಕೆ ಮರುಸಲ್ಲಿಸಲು ಸೂಚನೆ

ಉದ್ಯಾನ ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲರು, ಸರ್ಕಾರಕ್ಕೆ ಮರುಸಲ್ಲಿಸಲು ಸೂಚನೆ

ಬೆಂಗಳೂರು: ‘ಕರ್ನಾಟಕ ಸಾರ್ವಜನಿಕ ಉದ್ಯಾನಗಳ (ತಿದ್ದುಪಡಿ) ಮಸೂದೆ–2026 ಅನ್ನು ರಾಜ್ಯ ಸರ್ಕಾರಕ್ಕೆ ವಾಪಸ್‌ ಕಳುಹಿಸಿರುವ ರಾಜ್ಯಪಾಲರು, ಅಗತ್ಯ ತಿದ್ದುಪಡಿಗಳೊಂದಿಗೆ ಮರುಸಲ್ಲಿಸಿ ಎಂದು ಸೂಚಿಸಿದ್ದಾರೆ.

'ಸಾರ್ವಜನಿಕ ಉದ್ಯಾನಗಳ ಶೇ 5ರಷ್ಟು ಜಮೀನನ್ನು ಸಾರ್ವಜನಿಕ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲು ಈ ಮಸೂದೆ ಅವಕಾಶ ಕಲ್ಪಿಸುತ್ತದೆ. ಈ ಮಸೂದೆಗೆ ವಿರೋಧ ಪಕ್ಷಗಳು ಆಕ್ಷೇಪ ಸಲ್ಲಿಸಿದ್ದು, ಅವು ಗಂಭೀರ ಸ್ವರೂಪದ್ದಾಗಿವೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ’ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಮಸೂದೆಗೆ ವ್ಯಕ್ತವಾಗಿರುವ ಆಕ್ಷೇಪ ಗಳನ್ನು ಪರಿಶೀಲಿಸಿ, ಅಗತ್ಯ ವಿವರಣೆ ಹಾಗೂ ಬದಲಾವಣೆಗಳೊಂದಿಗೆ ಮಸೂದೆಯನ್ನು ಮತ್ತೆ ಸಲ್ಲಿಸಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ಮಸೂದೆ ವಾಪಸ್: ಸಾರ್ವಜನಿಕ ರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಕಾರಣಕ್ಕೆ ರಾಜ್ಯ ಸರ್ಕಾರವು ಈಗಾಗಲೇ ಮಸೂದೆಯನ್ನು ವಾಪಸ್ ಪಡೆದಿದೆ. ಈ ಕುರಿತು ಲೋಕಭವನಕ್ಕೆ ಮಾಹಿತಿ ರವಾನೆಯಾಗಿಲ್ಲ. ಹೀಗಾಗಿ, ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದೂ ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260905-51-694156609

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ