ಅಬ್ಬಿಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮನಸ್ಸಿಗೆ ಧ್ಯಾನದ ಬೆಳಕು

ಅಬ್ಬಿಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮನಸ್ಸಿಗೆ ಧ್ಯಾನದ ಬೆಳಕು

ಅಬ್ಬಿಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮನಸ್ಸಿಗೆ ಧ್ಯಾನದ ಬೆಳಕು

ನರೇಗಲ್:‌ ಆಧುನಿಕ ಜೀವನಶೈಲಿಯಿಂದ ಮಕ್ಕಳ ಮನಸ್ಸು ಚಂಚಲವಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ನೆಮ್ಮದಿ, ಒತ್ತಡದಿಂದ ಮುಕ್ತಿ ಹಾಗೂ ಏಕಾಗ್ರತೆಯತ್ತ ಸೆಳೆಯುವ ವಿಶೇಷ ಪ್ರಯತ್ನವೊಂದು ನರೇಗಲ್‌ ಸಮೀಪದ ಅಬ್ಬಿಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಶಾಲೆಯ ವಿಜ್ಞಾನ ಶಿಕ್ಷಕಿ ರೇಣುಕಾ ಯಲ್ಲಪ್ಪ ಕೆಲೂರ ಅವರ ಮಾರ್ಗದರ್ಶನ ಹಾಗೂ ಶಿಕ್ಷಕರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ಧ್ಯಾನ ತರಬೇತಿ ನೀಡಲಾಗುತ್ತಿದೆ. ಶಾಲಾ ಅವಧಿ ಮುಗಿದ ಬಳಿಕ ಧ್ಯಾನಕ್ಕಾಗಿಯೇ ಸಮಯ ಮೀಸಲಿಡಲಾಗುತ್ತಿದೆ. ಬೆಳಿಗ್ಗೆ ಹಾಗೂ ಸಂಜೆಯ ವಿಶೇಷ ತರಗತಿಗಳ ಆರಂಭದಲ್ಲೂ ಧ್ಯಾನ ಮಾಡಿಸಲಾಗುತ್ತಿದೆ. ಪ್ರತಿ ಶನಿವಾರವೂ ಈ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.

‘ಧ್ಯಾನವೆಂದರೆ ತನ್ನೊಳಗಿನ ಶಕ್ತಿಯನ್ನು ತಾನೇ ಕಂಡುಕೊಳ್ಳುವ ಅಂತರಂಗದ ಪಯಣ’ ಎಂಬುದನ್ನು ಮಕ್ಕಳಿಗೆ ಮನದಟ್ಟು ಮಾಡಿಸಲಾಗುತ್ತಿದೆ. ಶಾಲೆಯ ಆವರಣಕ್ಕೆ ಮಾತ್ರ ಸೀಮಿತವಾಗದೆ, ಪರಿಸರ ಧ್ಯಾನ, ಪ್ರಕೃತಿ ಧ್ಯಾನ ಹಾಗೂ ಹುಣ್ಣಿಮೆ ಧ್ಯಾನದಂತಹ ವೈವಿಧ್ಯಮಯ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಅನುಭವ ಮೂಡಿಸಲಾಗುತ್ತಿದೆ. ಪ್ರತಿದಿನ ಮನೆಯಲ್ಲೂ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ ಅರ್ಧ ಗಂಟೆ ಧ್ಯಾನದಲ್ಲಿ ತೊಡಗುವಂತೆ ಮಕ್ಕಳನ್ನು ಪ್ರೇರೇಪಿಸಲಾಗುತ್ತಿದೆ.

‘ವಿದ್ಯಾರ್ಥಿಗಳ ದೇಹ ಮತ್ತು ಮನಸ್ಸನ್ನು ಸಮತೋಲನದಲ್ಲಿ ಇರಿಸಲು ಪ್ರತಿದಿನ ಧ್ಯಾನ ಮಾಡಿಸಲಾಗುತ್ತಿದೆ. ಇದು ಏಕಾಗ್ರತೆ ಹಾಗೂ ಜ್ಞಾಪಕಶಕ್ತಿ ವೃದ್ಧಿಸುವುದರ ಜೊತೆಗೆ ಮಾನಸಿಕ ಒತ್ತಡ ಮತ್ತು ಆತಂಕ ದೂರವಾಗುತ್ತದೆ’ ಎಂದು ವಿಜ್ಞಾನ ಶಿಕ್ಷಕಿ ರೇಣುಕಾ ಕೆಲೂರು ತಿಳಿಸಿದರು.

‘ವಿದ್ಯಾರ್ಥಿಗಳಲ್ಲಿ ಗಮನಾರ್ಹ ಬದಲಾವಣೆ’

‘ಈ ಧ್ಯಾನ ತರಗತಿಗಳಿಂದಾಗಿ ವಿದ್ಯಾರ್ಥಿಗಳಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬರುತ್ತಿವೆ. ಮಕ್ಕಳು ಶಾಲೆಗೆ ಗೈರುಹಾಜರಾಗದೆ ನಿತ್ಯವೂ ಉತ್ಸಾಹದಿಂದ ತರಗತಿಗೆ ಹಾಜರಾಗುತ್ತಿದ್ದಾರೆ. ಪ್ರತಿದಿನ ಓದಿನ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳುತ್ತಿದ್ದು, ಬೋಧಿಸಿದ ಪಾಠಗಳನ್ನು ಮನನ ಮಾಡಿಕೊಳ್ಳುವ ಜೊತೆಗೆ ದೀರ್ಘಕಾಲ ನೆನಪಿನಲ್ಲಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಕೇವಲ ಓದು-ಬರಹಕ್ಕೆ ಸೀಮಿತವಾಗದೆ, ಶಾಲೆಯ ಎಲ್ಲಾ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹ ಮತ್ತು ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ವಿಶೇಷ’ ಎನ್ನುತ್ತಾರೆ ಅಬ್ಬಿಗೇರಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ