
ಗೌರಿಬಿದನೂರು ಪದವೀಧರ ಕ್ಷೇತ್ರದ ಭರವಸೆ ಈಡೇರಿಕೆ: ಶಶಿ ಹುಲಿಕುಂಟೆ ಮಠ್
ಗೌರಿಬಿದನೂರು: ವಿಧಾನ ಪರಿಷತ್ತಿನ ಪದವೀಧರ ಕ್ಷೇತ್ರದ ಮತದಾರರ ಸಮಸ್ಯೆಗಳನ್ನು ಆಲಿಸಿ, ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಹಂತ, ಹಂತವಾಗಿ ಈಡೇರಿಸಲಾಗುವುದು ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಕ್ಷೇತ್ರದ ಎಲ್ಲ ಹೋಬಳಿಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಪದವೀಧರರ ಅಹವಾಲು ಆಲಿಸಿದ್ದೇನೆ’ ಎಂದರು.
ಕಳೆದ ಬಾರಿ ಗೆದ್ದ ವಿಧಾನ ಪರಿಷತ್ ಸದಸ್ಯರು ಕ್ಷೇತ್ರದ ಅಭಿವೃದ್ಧಿಗೆ ನಿರೀಕ್ಷಿತ ರೀತಿಯಲ್ಲಿ ಸಹಕಾರ ನೀಡಿಲ್ಲ ಎಂಬ ಬಗ್ಗೆ ಮತದಾರರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಾರಿ ನನ್ನನ್ನು ಗೆಲ್ಲಿಸಿದರೆ ಪ್ರಣಾಳಿಕೆಯಲ್ಲಿರುವ ಭರವಸೆಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ಗಿರೀಶ್ ರೆಡ್ಡಿ, ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್, ಹರ್ಷವರ್ಧನ್ ರೆಡ್ಡಿ ಉಪಸ್ಥಿತರಿದ್ದರು.